ಬೆಂಗಳೂರು: ಹೊಯ್ಸಳ ಪೊಲೀಸರಿಗೇ ಮಚ್ಚು ಬೀಸಿ ಪರಾರಿಯಾದ ಸುಲಿಗೆಕೋರರು!
ರಾತ್ರಿ ವೇಳೆ ಕ್ಯಾಬ್ ಗಳ ಅಡ್ಡಗಟ್ಟಿ ಚಾಲಕರಿಂದ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಅನ್ನು ಬೆನ್ನುಹತ್ತಿದ ಪೊಲೀಸರಿಗೆ ಸುಲಿಗೆಕೋರರು ಲಾಂಗ್ ಬೀಸಿ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

Published On :
ಬೆಂಗಳೂರು: ರಾತ್ರಿ ವೇಳೆ ಕ್ಯಾಬ್ ಗಳ ಅಡ್ಡಗಟ್ಟಿ ಚಾಲಕರಿಂದ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಅನ್ನು ಬೆನ್ನುಹತ್ತಿದ ಪೊಲೀಸರಿಗೆ ಸುಲಿಗೆಕೋರರು ಲಾಂಗ್ ಬೀಸಿ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ನಗರದ ಜಾಲಹಳ್ಳಿಯ ಬಿಇಎಲ್ ವೃತ್ತದ ಬಳಿ ಈ ಘಟನೆ ನಡೆದಿದ್ದು, ಡಿಯೋ ಬೈಕ್ ನಲ್ಲಿ ಬಂದಿದ್ದ ನಾಲ್ಲರು ಸಲಿಗೆಕೋರರು ರಸ್ತೆ ಬದಿ ಕ್ಯಾಬ್ ನಿಲ್ಲಸಿ ಮಲಗಿದ್ದ ಇಬ್ಬರು ಚಾಲಕರನ್ನು ಸುಲಿಗೆ ಮಾಡಿದ್ದಾರೆ. ಲಾಂಗ್, ಚಾಕು ತೊರಿಸಿ ಅವರ ಪರ್ಸ್, ಮೊಬೈಲ್, ಹಣವನ್ನು ದೋಚಿದ್ದರು. ಕೂಡಲೇ ಕ್ಯಾಬ್ ಚಾಲಕರು ಜಾಲಹಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಅಲ್ಲಿಯೇ ಸಮೀಪದಲ್ಲಿದ್ದ ಹೊಯ್ಸಳ ವಾಹನ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಬಳಿಕ ಹೊಯ್ಸಳ ಗಾಡಿಯಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು ಸುಲಿಗೆಕೋರರನ್ನು ಹಿಡಿಯಲೆತ್ನಿಸಿದಾಗ ದುಷ್ಕರ್ಮಿಗಳು ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹಿಡಿಯಲೆತ್ನಿಸಿದ ಪೊಲೀಸರ ಮೇಲೆ ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ನಡೆಸಿದ್ದು, ಈ ವೇಳೆ ಹನುಮಂತ ರಾಜು ಎಂಬ ಹೋಮ್ ಗಾರ್ಡ್ ಗಾಯಗೊಂಡಿದ್ದಾರೆ. ಹೊಯ್ಸಳದಲ್ಲಿದ್ದ ಎಎಸ್‍ಐ ಮೋಪುರಿ ಎಂಬವರು ಕೂದಲೆಳೆಯಲ್ಲಿ ಪಾರಾಗಿದ್ದಾರೆ. ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದು, ಹೋಮ್ ಗಾರ್ಡ್ ಹನುಮಂತ ರಾಜು ಅವರ ತಲೆಗೆ ಗಂಭೀರ ಪೆಟ್ಟಾಗಿದ್ದು, ಪ್ರಸ್ತುತ ಅವರನ್ನು ಮಲ್ಲೇಶ್ವರಂನ ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳಿಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


