ನಗರದ ರಸ್ತೆ ಗುಂಡಿ ಮುಚ್ಚಲು ಮತ್ತೊಮ್ಮೆ ಗಡುವು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಳೆಯಿಂದಾಗಿ ನಗರದ ರಸ್ತೆಗಳಲ್ಲಿ ನಿರ್ಮಾಣಗೊಂಡಿರುವ ಗುಂಡಿಗಳನ್ನು ಮುಚ್ಚಲು ಮತ್ತೊಮ್ಮೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿಗೆ ಮತ್ತೊಮ್ಮೆ ಗಡುವು ನೀಡಿದ್ದಾರೆ...

Published On :
ಬೆಂಗಳೂರು: ಮಳೆಯಿಂದಾಗಿ ನಗರದ ರಸ್ತೆಗಳಲ್ಲಿ ನಿರ್ಮಾಣಗೊಂಡಿರುವ ಗುಂಡಿಗಳನ್ನು ಮುಚ್ಚಲು ಮತ್ತೊಮ್ಮೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿಗೆ ಮತ್ತೊಮ್ಮೆ ಗಡುವು ನೀಡಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯ ರಸ್ತೆ ಗುಂಡಿಗಳನ್ನು ಮುಚ್ಚಲು ಗಡುವು ವಿಸ್ತರಿಸಿರುವ ಸಿದ್ದರಾಮಯ್ಯ ಅವರು ನ.6 ರೊಳಗೆ ಎಲ್ಲಾ ಗುಂಡಿಗಳನ್ನು ಮುಚ್ಚುವಂತೆ ಸೂಚನೆ ನೀಡಿದ್ದಾರೆ.
ಈ ಹಿಂದೆ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಅ.25ರೊಳಗೆ ಮುಖ್ಯಮಂತ್ರಿಗಳು ಬಿಬಿಎಂಪಿಗೆ ಸೂಚಿಸಿದ್ದರು. ಆಧರೆ, ನಿರಂತರವಾಗಿ ಮಳೆ ಬಿದ್ದಿದ್ದರಿಂದ ನಿಗದಿತ ಅವಧಿಯಲ್ಲಿ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿಗೆ ಸಾಧ್ಯವಾಗಿರಲಿಲ್ಲ. ಹೀಗಾಗಿ ಗಡುವು ವಿಸ್ತರಿಸುವಂತೆ ಮೇಯರ್ ಆರ್. ಸಂಪತ್ ರಾಜ್ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿ ಪತ್ರವೊಂದನ್ನು ಬರೆದಿದ್ದರು.
ಈಗಾಗಲೇ ಶೇ.90ರಷ್ಟು ಗುಂಡಿಗಳನ್ನು ಮುಚ್ಚಲಾಗಿದ್ದು, ಮತ್ತಷ್ಟು ಕೆಲಸಗಳು ಬಾಕಿಯಿದ್ದು, ಅವುಗಳನ್ನು ಪೂರ್ಣಗೊಳಿಸಲು ಮತ್ತಷ್ಟು ಕಾಲಾವಕಾಶದ ಅಗತ್ಯವಿದೆ. ಭಾರೀ ಮಳೆಯಿಂದಾಗಿ ಗುಂಡಿ ಮುಚ್ಚುವ ಕಾರ್ಯಕ್ಕೆ ಸಮಸ್ಯೆಯುಂಟಾಗಿದೆ ಎಂದು ತಿಳಿಸಿದ್ದರು.
ಬಿಬಿಎಂಪಿ ಮೇಯರ್ ಹಾಗೂ ಬಿಬಿಎಂಪಿ ಆಯುಕ್ತರು ಮತ್ತಷ್ಟು ಕಾಲಾವಕಾಶದ ಅಗತ್ಯವಿದೆ ಎಂದು ಮನವಿ ಮಾಡಿಕೊಂಡಿದ್ದರು. ಮಳೆ ಬಂದ ಪರಿಣಾಮದಿಂದಾಗಿ ಕಾರ್ಯಗಳನ್ನು ಪೂರ್ಣಗೊಳಿಸಲು ತೊಡಕುಂಟಾಗಿದೆ ಎಂದು ಹೇಳಿದ್ದರು. ಈ ಹಿನ್ನಲೆಯಲ್ಲಿ ನ.6ರವರೆಗೂ ಗಡುವು ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
10 ದಿನಗಳ ಕಾಲ ಕಾಲಾವಕಾಶ ನೀಡುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೆ. ಇದರಂತೆ ಮುಖ್ಯಮಂತ್ರಿಗಳು ಚರ್ಚೆ ನಡೆಸಿ ಗಡುವು ವಿಸ್ತರಿಸಿದ್ದಾರೆ. ಈಗಾಗಲೇ ಶೇ.95ರಷ್ಟು ಕಾರ್ಯಗಳು ಪೂರ್ಣಗೊಂಡಿದ್ದು, ಇನ್ನುಳಿದ ಕೆಲಸಗಳನ್ನು ಮುಂದಿನ ದಿನಗಳಲ್ಲಿ ಪೂರ್ಣಗೊಳ್ಳಿಲಿದೆ. ನ.6ರ ಬಳಿಕ ನಗರ ರಸ್ತೆಗಳಲ್ಲಿ ಎಲ್ಲಿಯೇ ಗುಂಡಿಗಳಿದ್ದರು ಅದಕ್ಕೆ ಇಂಜಿನಿಯರ್ ಗಳೇ ಜವಾಬ್ದಾರರಾಗಿರುತ್ತಾರೆ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಮೇಯರ್ ಹೇಳಿದ್ದಾರೆ.
ನಮ್ಮ ಇಂಜಿನಿಯರ್ ಗಳು ಹಾಗೂ ಗುತ್ತಿಗೆದಾರರು ಹಗಲು, ರಾತ್ರಿ ಕೆಲಸ ಮಾಡುತ್ತಿದ್ದಾರೆ. ರಸ್ತೆ ಗುಂಡಿ ಗಳನ್ನು ಮುಚ್ಚುತ್ತಿದ್ದಾರೆ. ಮುಂದಿನ ಗಡುವಿನೊಳಗೆ ನಮ್ಮ ಕಾರ್ಯಗಳನ್ನು ಪೂರ್ಣಗೊಳಿಸುತ್ತೇವೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


