ರಾಜ್ಯದ ನೂತನ ಡಿಜಿ ಮತ್ತು ಐಜಿಪಿಯಾಗಿ ನೀಲಮಣಿ ರಾಜು ನೇಮಕ
ಐಪಿಎಸ್ ಅಧಿಕಾರಿ ನೀಲಮಣಿ ರಾಜು ಅವರನ್ನು ರಾಜ್ಯದ ನೂತನ ಡಿಜಿ ಮತ್ತು ಐಜಿಪಿಯಾಗಿ ನೇಮಕ ಮಾಡಲಾಗಿದೆ...

Published On :
ಬೆಂಗಳೂರು: ಐಪಿಎಸ್ ಅಧಿಕಾರಿ ನೀಲಮಣಿ ರಾಜು ಅವರನ್ನು ರಾಜ್ಯದ ನೂತನ ಡಿಜಿ ಮತ್ತು ಐಜಿಪಿಯಾಗಿ ನೇಮಕ ಮಾಡಲಾಗಿದೆ.
ಉತ್ತರಖಂಡ್ ಮೂಲದ ನೀಲಮಣಿ ರಾಜು ಅವರನ್ನು ಸೇವಾ ಜೇಷ್ಠತೆ ಆಧಾರದ ಮೇಲೆ ಡಿಜಿ-ಐಜಿಪಿಯಾಗಿ ಆಯ್ಕೆಯಾಗಿದ್ದು ಇವರು ಕರ್ನಾಟಕ ರಾಜ್ಯದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕರಾಗಿದ್ದಾರೆ.
ನೀಲಮಣಿ ರಾಜು ಅವರು 1983ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದು 23 ವರ್ಷಗಳ ಕಾಲ ಕೇಂದ್ರ ಸೇವೆಯಲ್ಲಿ ಸೇವೆ ಸಲ್ಲಿಸಿದ್ದರು.
ಆರ್ ಕೆ ದತ್ತ ಅವರು ಇಂದು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ನೀಲಮಣಿ ರಾಜು ಅವರನ್ನು ಆಯ್ಕೆ ಮಾಡಲಾಗಿದೆ. ನೂತನ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಹುದ್ದೆಗೆ ಮೂವರು ಹಿರಿಯ ಅಧಿಕಾರಿಗಳ ಮಧ್ಯೆ ತೀವ್ರ ಪೈಪೋಟಿ ನಡೆದಿದ್ದು ಕೊನೆಗೆ ನೀಲಮಣಿ ರಾಜು ಅವರು ಆಯ್ಕೆಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruSiddaramaiahಸಿದ್ದರಾಮಯ್ಯKarnatakaಕರ್ನಾಟಕDG & IGPNeelamani N Rajuನೀಲಮಣಿ ಎನ್ ರಾಜುಡಿಜಿ ಮತ್ತು ಐಜಿಪಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


