ರಾಜ್ಯಕ್ಕೆ ಐತಿಹಾಸಿಕ ದಿನ: ಮೊದಲ ಮಹಿಳಾ ಡಿಜಿಪಿಯಾಗಿ ನೀಲಮಣಿ ಅಧಿಕಾರ ಸ್ವೀಕಾರ
ರಾಜ್ಯ ಪೊಲೀಸ್ ಮಹಾನಿರ್ದೇಶಕರು ಯಾರಾಗಬಹುದು ಎಂಬ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದ್ದು, ಹಿರಿಯ ಐಪಿಎಸ್ ಅಧಿಕಾರಿಣಿ ನೀಲಮಣಿ ಎಸ್.ರಾಜು ಅವರು ರಾಜ್ಯದ ನೂತನ ಡಿಜಿಪಿಯಾಗಿ ನೇಮಕಗೊಂಡಿದ್ದಾರೆ.

Published On :
ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರು ಯಾರಾಗಬಹುದು ಎಂಬ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದ್ದು, ಹಿರಿಯ ಐಪಿಎಸ್ ಅಧಿಕಾರಿಣಿ ನೀಲಮಣಿ ಎಸ್.ರಾಜು ಅವರು ರಾಜ್ಯದ ನೂತನ ಡಿಜಿಪಿಯಾಗಿ ನೇಮಕಗೊಂಡಿದ್ದಾರೆ.
ಈ ಮೂಲಕ ರಾಜ್ಯ ಪೊಲೀಸ್ ಮಹಾನಿರ್ದೇಶಕ ಹುದ್ದೆಯು ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಮಹಿಳಾ ಅಧಿಕಾರಿಗೆ ಒಲಿದು ಬಂದಿದೆ.
ನೀಲಮಣಿ ರಾಜು ಅವರು ರಾಜ್ಯ ಪೊಲೀಸ್ ಕೇಂದ್ರ ಕಚೇರಿಯಲ್ಲಿ ನಿರ್ಗಮಿತ ಡಿಜಿ-ಐಜಿ ರೂಪಕ್ ಕುಮಾರ್ ದತ್ತಾ ಅವರಿಂದ ನಿನ್ನೆ ಸಂಜೆ ಸರಳ ರೀತಿಯಲ್ಲಿ ಬ್ಯಾಟನ್ ಪಡೆದು ಅಧಿಕಾರ ಸ್ವೀಕಾರ ಮಾಡಿದರು.
ಉತ್ತರಪ್ರದೇಶದ ರೂರ್ಕಿ ಮೂಲದವರಾಗಿರುವ ನೀಲಮಣಿ ರಾಜು ಅವರು 1960ರ ಜ.17ರಂದು ಜನಿಸಿದ್ದರು, 1983ನೇ ಸಾಲಿನ ಕೇಡರ್ ನ ಐಪಿಎಸ್ ಅಧಿಕಾರಿಯಾಗಿದ್ದಾರೆ, ರಾಜ್ಯ ಮಾಹಿತಿ ಆಯೋಗದ ಮುಖ್ಯ ಆಯುಕ್ತ ನರಸಿಂಹರಾಜು ಅವರ ಪತ್ನಿಯಾಗಿರುವ ಅವರು ಒಂದಷ್ಟು ಕಾಲ ಬೆಂಗಳೂರು ಗ್ರಾಮಾಂತರ ಎಸ್ಪಿ ಯಾಗಿ ಕಾರ್ಯನಿರ್ವಹಿಸಿದ್ದರು. ನಂತರ 1993ರಲ್ಲಿ ಕೇಂದ್ರ ಸೇವೆಗೆ ತೆರಳಿದ್ದರು. 23ಕ್ಕೂ ಹೆಚ್ಚು ವರ್ಷಗಳ ಕಾಲ ರಾಜ್ಯದಿಂದ ಹೊರದಿದ್ದ ನೀಲಮಣಿಯವರು 2016ರಲ್ಲಿ ರಾಜ್ಯ ಸೇವೆಗೆ ವಾಪಸಾಗಿದ್ದರು.
2016ರಲ್ಲಿ ರಾಜ್ಯ ಸೇವೆಗೆ ವಾಪಸಾಗಿದ್ದ ನೀಲಮಣಿಯವರು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅವರಿಗಾಗಿ ಈ ವಿಶೇಷ ಹುದ್ದೆಯನ್ನು ಸೃಷ್ಟಿಮಾಡಲಾಗಿತ್ತು. ಕರಾವಳಿ ರಕ್ಷಣಾ ಪಡೆ, ನಕ್ಸಲ್ ನಿಗ್ರಹ ದಳ, ಉಗ್ರ ನಿಗ್ರಹ ದಳ, ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ ಹಾಗೂ ಖಾಸಗಿ ಭದ್ರತಾ ಪಡೆಗಳ ನಿಯಂತ್ರಣ ಇವರ ಕೆಳಗೆ ಬರುತ್ತಿತ್ತು. ಬಳಿಕ ಅಗ್ನಿಶಾಮಕ ದಳ ಡಿಜಿಪಿಯಾಗಿಯೂ ಸೇವೆ ಸಲ್ಲಿಸಿದ್ದರು. ಈ ಮೂಲಕ ರಾಜ್ಯದಲ್ಲಿ ಡಿಜಿಪಿ ಪದವಿಗೇರಿದ ಮೊದಲ ಮಹಿಳಾ ಪೊಲೀಸ್ ಅಧಿಕಾರಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ನೀಲಮಣಿ ರಾಜು ಅವರು 2020ರ ಜನವರಿಯಲ್ಲಿ ಸೇವೆಯಿಂದ ನಿವೃತ್ತರಾಗಲಿದ್ದು, 2 ವರ್ಷ 3 ತಿಂಗಳ ಅವಧಿಗೆ ಡಿಜಿ-ಐಡಿಪಿ ಹುದ್ದೆಯಲ್ಲಿ ಇರಲಿದ್ದಾರೆ.
24 ಗಂಟೆ ಕೆಲಸ ಮಾಡಲು ಸಿದ್ಧ
ರಾಜ್ಯ ಸರ್ಕಾರ ನನಗೆ ಬಹುದೊಡ್ಡ ಹೊಣೆಗಾರಿಕೆಯನ್ನು ನೀಡಿದ್ದು, ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ನನಗೆ ರಾಜ್ಯದ ಪರಿಚಯವಿದೆ. ದಿನದ 24 ಗಂಟೆಗಳ ಕಾಲ ಕೆಲಸ ಮಾಡಲು ಸಿದ್ಧಳಿದ್ದೇನೆಂದು ನೀಲಮಣಿ ರಾಜು ಅವರು ಹೇಳಿದ್ದಾರೆ.
ಇದೇ ವೇಳೆ ಗುಸ್ತು ವಾಹನ ವ್ಯವಸ್ಥೆ ಹಾಗೂ ಪೊಲೀಸ್ ಇಲಾಖೆಯಲ್ಲಿ ಆರ್.ಕೆ. ದತ್ತಾ ಅವರು ತಂದಿರುವ ಸುಧಾರಣೆಗಳನ್ನು ನೀಲಮಣಿಯವವರು ಕೊಂಡಾಡಿದ್ದಾರೆ.
ಸೇವಾ ಹಿರಿತನದ ಆಧಾರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಲಮಣಿ ರಾಜು ಅವರನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕ ಮಾಡಿದ್ದು, ಕಿಶೋರ್ ಚಂದ್ರ ಅವರನ್ನು ಸಿಐಡಿ ಡಿಜಿ ಹುದ್ದೆಯಿಂದ ವರ್ಗಾವಣೆ ಮಾಡಿ ಕರ್ನಾಟಕ ರಾಜ್ಯ ಪೊಲೀಸ್ ಗೃಹ ನಿಗಮದ ಅಧ್ಯಕ್ಷ ಹುದ್ದೆಗೆ ನೇಮಿಸಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳದ ಡಿಜಿ ಎಂ.ಎನ್ ರೆಡ್ಡಿ ಅವರನ್ನು ಗೃಹ ರಕ್ಷಕ ದಳ, ಅಗ್ನಿಶಾಮಕದಳದ ಕಮಾಂಡೆಂಟ್ ಆಗಿ ನೇಮಕಗೊಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


