ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಕೇಸ್: ಕಾರು ಡಿಕ್ಕಿ ಹೊಡೆದು ವೃದ್ಧೆ ಸಾವು
ಕಾರು ಡಿಕ್ಕಿ ಹೊಡೆದ ಪರಿಣಾಮ ವೃದ್ದೆಯೊಬ್ಬರು ಮೃತ ಪಟ್ಟಿರುವ ಘಟನೆ ಮತ್ತೀಕೆರೆ ಸಮೀಪದ ಎಚ್ಎಂಟಿ ರಸ್ತೆಯಲ್ಲಿ ಸಂಭವಿಸಿದೆ....

Published On :
ಬೆಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ವೃದ್ದೆಯೊಬ್ಬರು ಮೃತ ಪಟ್ಟಿರುವ ಘಟನೆ ಮತ್ತೀಕೆರೆ ಸಮೀಪದ ಎಚ್ಎಂಟಿ ರಸ್ತೆಯಲ್ಲಿ ಸಂಭವಿಸಿದೆ.
ಶುಕ್ರವಾರ ಬೆಳಿಗ್ಗೆ ನಡೆದ ಅಪಘಾತದಲ್ಲಿ ಎಲಿಯಮ್ಮ (74) ಎಂಬುವರು ಮೃತಪಟ್ಟಿದ್ದಾರೆ. ಅಪಘಾತದ ನಂತರ ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿದ್ದಾನೆ. ಘಟನೆಯ ದೃಶ್ಯ ಸಿ.ಸಿ ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆ ಸುಳಿವು ಆಧರಿಸಿ ಯಶವಂತಪುರ ಸಂಚಾರ ಪೊಲೀಸರು ಆರೋಪಿಯ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.
ಪತಿ ಜಾಕೊಬ್ ಜತೆ ಮತ್ತೀಕೆರೆಯಲ್ಲಿ ನೆಲೆಸಿದ್ದ ಎಲಿಯಮ್ಮ, ಎಂದಿನಂತೆ ಶುಕ್ರವಾರ ಬೆಳಿಗ್ಗೆ ಮನೆ ಸಮೀಪದ ಚರ್ಚ್‌ಗೆ ಹೋಗಿದ್ದರು. ಪ್ರಾರ್ಥನೆ ಮುಗಿಸಿ 6.30 ಸುಮಾರಿಗೆ ಮನೆಗೆ ವಾಪಸಾಗಲು ಎಚ್‌ಎಂಟಿ ರಸ್ತೆ ದಾಟುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕೆಂಪು ಬಣ್ಣದ ಮಾರುತಿ ಆಲ್ಟೊ ಕಾರು ಅವರಿಗೆ ಡಿಕ್ಕಿ ಹೊಡೆಯಿತು.
ಗುದ್ದಿದ ರಭಸಕ್ಕೆ ನಾಲ್ಕೈದು ಅಡಿಯಷ್ಟು ಮೇಲೆ ಎಗರಿ ಕೆಳಗೆ ಬಿದ್ದ ಎಲಿಯಮ್ಮ, ತೀವ್ರ ರಕ್ತಸ್ರಾವವಾಗಿ ನಿತ್ರಾಣರಾದರು. ತಕ್ಷಣ ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದರು. ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು ಎಂದು ಪೊಲೀಸರು ಹೇಳಿದ್ದಾರೆ.
ಸಮೀಪದ ಕಟ್ಟಡವೊಂದರ ಸಿ.ಸಿ ಟಿ.ವಿ ಕ್ಯಾಮೆರಾದಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ. 8319 ಕಾರಿನ ನೋಂದಣಿಯಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


