‘ಮಂಗಳೂರು ಚಲೋ’ ಬಿಜೆಪಿ ಬೈಕ್ ರ್ಯಾಲಿಗೆ ಅನುಮತಿ ನಿರಾಕರಣೆ
ಪಿಎಫ್ಐ, ಕೆ.ಎಫ್.ಡಿ ಸಂಘಟನೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಮತ್ತು ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಇದೇ....

Published On :
ಮಂಗಳೂರು: ಪಿಎಫ್ಐ, ಕೆ.ಎಫ್.ಡಿ ಸಂಘಟನೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಮತ್ತು ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಇದೇ ಗುರುವಾರ ಬಿಜೆಪಿ ಯುವ ಮೋರ್ಚಾ ವತಿಯಿಂದ ನಡೆಸಲು ಉದ್ದೇಶಿಸಿದ್ದ ಮಂಗಳೂರು ಚಲೋ ಬೈಕ್ ರ್ಯಾಲಿ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.
ಇಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆ ನಡೆಸುವುದಕ್ಕೂ ಅನುಮತಿ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾ ಬೈಕ್ ರ್ಯಾಲಿಗೆ ಮತ್ತು ಯಾವುದೇ ಸಾರ್ವಜನಿಕ ಸಭೆ ನಡೆಸಲು ಅನುಮತಿ ನಿರಾಕರಿಸಲಾಗಿದೆ ಮತ್ತು ಈ ಕುರಿತು ಬಿಜೆಪಿ ಯುವ ಮೋರ್ಚಾ ಮುಖಂಡರಿಗೆ ಅಧಿಕೃತವಾಗಿ ಮಾಹಿತಿ ನೀಡುವುದಾಗಿ ನಗರ ಪೊಲೀಸ್ ಆಯುಕ್ತ ಟಿ ಆರ್ ಸುರೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


