ಬಳ್ಳಾರಿಗೆ ತೆರಳಲು ಅನುಮತಿ ಕೋರಿ ಜನಾರ್ಧನ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ "ಸುಪ್ರೀಂ"
ತವರು ಜಿಲ್ಲೆ ಬಳ್ಳಾರಿ ಪ್ರವೇಶ ಸಂಬಂಧ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

Published On :
ನವದೆಹಲಿ: ತವರು ಜಿಲ್ಲೆ ಬಳ್ಳಾರಿ ಪ್ರವೇಶ ಸಂಬಂಧ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಈ ಹಿಂದೆ ಅಕ್ರಮ ಗಣಿಕಾರಿಕೆ ಪ್ರಕರಣ ಸಂಬಂಧ ತನಿಖೆ ಎದುರಿಸುತ್ತಿರುವ ಗಾಲಿ ಜನಾರ್ಧನ ರೆಡ್ಡಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಸಿಬಿಐ ವಿಶೇಷ ಕೋರ್ಟ್ ಷರತ್ತು ವಿಧಿಸಿತ್ತು. ಈ ಷರತ್ತುಗಳ ಪೈಕಿ ಜನಾರ್ಧನ ರೆಡ್ಡಿ ಬಳ್ಳಾರಿ ಪ್ರವೇಶಿಸದಂತೆ ಹಾಗೂ ಸಾಕ್ಷ್ಚನಾಶ ಪಡಿಸದಂತೆ ಕೋರ್ಟ್ ಸೂಚನೆ ನೀಡಿತ್ತು.
ಆದರೆ ಸಿಬಿಐ ವಿಶೇಷ ಕೋರ್ಟ್ ನ ಷರತ್ತುಗಳನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದ ಜನಾರ್ಧನ ರೆಡ್ಡಿ, ಬಳ್ಳಾರಿಯಲ್ಲಿ ನೆಲೆಸಲು ಅವಕಾಶ ಮಾಡಿಕೊಂಡುವಂತೆ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಎಕೆ ಸಿಕ್ರಿ ಹಾಗೂ ಅಶೋಕ್ ಭೂಷಣ್ ನೇತೃತ್ವದ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ಆ ಮೂಲಕ ರೆಡ್ಡಿ ವಿರುದ್ಧ ಬಳ್ಳಾರಿ ಪ್ರವೇಶ ನಿಷೇಧ ಮುಂದುವರೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtನವದೆಹಲಿNew Delhiಸುಪ್ರೀಂ ಕೋರ್ಟ್Janardhana Reddyಜನಾರ್ಧನ ರೆಡ್ಡಿIllegal mining caseಅಕ್ರಮ ಗಣಿಗಾರಿಕೆ ಪ್ರಕರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


