ರಾಜ್ಯ

ಬೆಂಗಳೂರು: ಹಿರಿಯ ಪತ್ರಕರ್ತೆ, ಸಾಹಿತಿ ಗೌರಿ ಲಂಕೇಶ್ ಗುಂಡಿಕ್ಕಿ ಹತ್ಯೆ

ಹಿರಿಯ ಪತ್ರಕರ್ತೆ ಹಾಗೂ ಸಾಹಿತಿ ಗೌರಿ ಲಂಕೇಶ್‌ ಅವರನ್ನು ಅವರ ರಾಜರಾಜೇಶ್ವರಿ ನಗರದ ನಿವಾಸದಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ....

ಬೆಂಗಳೂರು: ಹಿರಿಯ ಪತ್ರಕರ್ತೆ, ಸಾಹಿತಿ ಗೌರಿ ಲಂಕೇಶ್ ಗುಂಡಿಕ್ಕಿ ಹತ್ಯೆ
ಗೌರಿ ಲಂಕೇಶ್
Published On :
ಬೆಂಗಳೂರು: ಹಿರಿಯ ಪತ್ರಕರ್ತೆ ಹಾಗೂ ಸಾಹಿತಿ ಗೌರಿ ಲಂಕೇಶ್‌ ಅವರನ್ನು ಅವರ ರಾಜರಾಜೇಶ್ವರಿ ನಗರದ ನಿವಾಸದಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ.
ಮೂವರು ದುಷ್ಕರ್ಮಿಗಳು ಇಂದು ಸಂಜೆ ಮನೆಯ ಹೊರಗಡೆ ನಿಂತಿದ್ದ ಗೌರಿ ಲಂಕೇಶ್ ಅವರ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದು, ಪತ್ರಕರ್ತೆ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ರಾಜರಾಜೇಶ್ವರಿ ನಗರ ಪೊಲೀಸರು ದೌಡಾಯಿಸಿದ್ದು, ಗೌರಿ ಲಂಕೇಶ್ ಅವರು ಮನೆಯ ಹೊರಗೆ ನಿಂತ ವೇಳೆ ಎದೆ ಹಾಗೂ ಹೃದಯ ಭಾಗಕ್ಕೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಡಿಸಿಪಿ ಅನುಚೇತ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಎಡಪಂಥೀಯ ವಿಚಾರಧಾರೆ ಹೊಂದಿದ್ದ ಗೌರಿ ಲಂಕೇಶ್ ಅವರು ತಂದೆ ಪಿ ಲಂಕೇಶ್ ಒಡೆತನದ ಲಂಕೇಶ್ ಪತ್ರಿಕೆ ನಡೆಸುತ್ತಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.