ಗೌರಿ ಲಂಕೇಶ್ ಹತ್ಯೆ: ಹೀನಕೃತ್ಯ ಎಸೆಗಿದವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಅವರ ಹತ್ಯೆಯನ್ನು ಸಿಎಂ ಸಿದ್ದರಾಮಯ್ಯ ಕಟು ಶಬ್ದಗಳಿಂದ ಟೀಕಿಸಿದ್ದು, ಇಂತಹ ಹೀನಕೃತ್ಯವನ್ನು ಎಸಗಿದವರನ್ನು ಪತ್ತೆ ಹಚ್ಚಿ ಖಂಡಿತಾ ಕಾನೂನಾತ್ಮಕವಾಗಿ ಶಿಕ್ಷಿಸಲಾಗುತ್ತದೆ ಎಂದು ಹೇಳಿದ್ದಾರೆ.

Published On :
ಬೆಂಗಳೂರು: ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಅವರ ಹತ್ಯೆಯನ್ನು ಸಿಎಂ ಸಿದ್ದರಾಮಯ್ಯ ಕಟು ಶಬ್ದಗಳಿಂದ ಟೀಕಿಸಿದ್ದು, ಇಂತಹ ಹೀನಕೃತ್ಯವನ್ನು ಎಸಗಿದವರನ್ನು ಪತ್ತೆ ಹಚ್ಚಿ ಖಂಡಿತಾ ಕಾನೂನಾತ್ಮಕವಾಗಿ ಶಿಕ್ಷಿಸಲಾಗುತ್ತದೆ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ತಮ್ಮ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, " ಕರ್ನಾಟಕದ ಪ್ರಗತಿಪರ ಚಿಂತನೆಯ ಹೆಮ್ಮೆಯಾಗಿದ್ದ ಧೀಮಂತ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಪೈಶಾಚಿಕವಾಗಿ ಹತ್ಯೆಗೈದಿರುವುದನ್ನು ಕಟು ಶಬ್ಧಗಳಲ್ಲಿ ಖಂಡಿಸುತ್ತೇನೆ. ಪದಗಳಿಗೂ ನಿಲುಕದ ಇಂಥ ಹೀನಕೃತ್ಯ ಎಸೆಗಿದವರನ್ನು, ಇದರ ಹಿಂದಿನ ದುಷ್ಟಶಕ್ತಿಗಳನ್ನು ಪತ್ತೆಹಚ್ಚಿ ಶಿಕ್ಷಿಸಲು ಸರ್ವ ಪ್ರಯತ್ನಗಳನ್ನೂ ಮಾಡಲಾಗುವುದು" ಎಂದು ಹೇಳಿದ್ದಾರೆ.
ಅಂತೆಯೇ ಲಂಕೇಶ್ ಹತ್ಯೆ ಸಂಬಂಧ ಡಿಜಿಪಿ ಅವರೊಂದಿಗೆ ಚರ್ಚೆ ನಡೆಸಿದ್ದು, ಪ್ರಕರಣದ ಕೂಲಂಕುಷ ತನಿಖೆ ನಡೆಸಿ ಶೀಘ್ರ ದುಷ್ಕರ್ಮಿಗಳನ್ನು ಬಂಧಿಸುವಂತೆ ಸೂಚನೆ ನೀಡಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಂಗೆ ತನಿಖೆಯ ಕ್ಷಣಕ್ಷಣದ ಮಾಹಿತಿ
ಇನ್ನು ಭಾರಿ ಆಕ್ರೋಶಕ್ಕೆ ಕಾರಣವಾಗಿರುವ ಗೌರಿ ಲಂಕೇಶ್ ಅವರ ಹತ್ಯೆ ಸಂಬಂದ ತೀವ್ರ ಒತ್ತಡಕ್ಕೆ ಒಳಗಾಗಿರುವ ರಾಜ್ಯ ಸರ್ಕಾರ, ಪೊಲೀಸ್ ತನಿಖೆಯ ಕ್ಷಣ ಕ್ಷಣದ ಮಾಹಿತಿಯನ್ನು ಪಡೆಯುತ್ತಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಅವರು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ. ಅಲ್ಲದೆ ಗುಪ್ತಚರ ಇಲಾಖೆ ಅಧಿಕಾರಿಗಳಿಂದಲೂ ಸಿಎಂ ಮಾಹಿತಿ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರು ಕೊಲೆಯಾಗಿದ್ದು ಆಘಾತವನ್ನುಂಟುಮಾಡಿದೆ ಎಂದು ಹೇಳಿರುವ ಕಾನೂನು ಸಚಿವ ಟಿ.ಬಿ.ಜಯಚಂದ್ರ, ಆರೋಪಿಗಳನ್ನು ಪತ್ತೆಹಚ್ಚಲು ತನಿಖೆ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ತಾವು ಗೃಹ ಖಾತೆ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಇತರರೊಂದಿಗೆ ಸಂಪರ್ಕದಲ್ಲಿರುವುದಾಗಿ ಹೇಳಿದ್ದಾರೆ.
ಇದೊಂದು ಆಘಾತಕಾರಿ ಘಟನೆ. ಗೌರಿಯವರು ಯಾವಾಗಲೂ ಜಾತ್ಯತೀತ ತತ್ವಗಳ ಮೇಲೆ ನಂಬಿಕೆಯಿಟ್ಟಿದ್ದರು. ಅವರು ಹತ್ಯೆಗೀಡಾಗಿರುವುದು ನಿಜಕ್ಕೂ ಬೇಸರದ ಸಂಗತಿ. ಇದರ ಹಿಂದೆ ಯಾವುದೋ ಪಿತೂರಿ ನಡೆದಿರಬೇಕು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಲಿದೆ ಎಂದು ಎಎನ್ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruSiddaramaiahಸಿದ್ದರಾಮಯ್ಯkarnataka policeಕರ್ನಾಟಕ ಪೊಲೀಸ್Gauri Lankesh Murderಗೌರಿ ಲಂಕೇಶ್ ಸಾವು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


