ತುಮಕೂರು ಎಚ್‌ಎಎಲ್ ಹೆಲಿಕಾಪ್ಟರ್ ಘಟಕಕ್ಕೆ ಪರಿಸರ ಆರಣ್ಯ ಸಚಿವಾಲಯದಿಂದ ಅನುಮತಿ
ಹಿಂದೂಸ್ತಾನ್ ಏರೋನಾಟಿಕಲ್ ಲಿಮಿಟೆಡ್ (ಎಚ್ಎಎಲ್) ತುಮಕೂರಿನಲ್ಲಿ ತನ್ನ ಹೊಸ ಹೆಲಿಕಾಪ್ಟರ್ ಘಟಕ ಸ್ಥಾಪನೆ ಮಾಡಲು ಆಲೋಚಿಸಿದ್ದು ಇದೀಗ ಪರಿಸರ, ಅರಣ್ಯ ಸಚಿವಾಲಯ ಈ ಯೋಜನೆಗೆ ಒಪ್ಪಿಗೆ ನೀಡಿದೆ.

Published On :
ತುಮಕೂರು: ಹಿಂದೂಸ್ತಾನ್ ಏರೋನಾಟಿಕಲ್ ಲಿಮಿಟೆಡ್ (ಎಚ್ಎಎಲ್) ತುಮಕೂರಿನಲ್ಲಿ ತನ್ನ ಹೊಸ ಹೆಲಿಕಾಪ್ಟರ್ ಘಟಕ ಸ್ಥಾಪನೆ ಮಾಡಲು ಆಲೋಚಿಸಿದ್ದು ಇದೀಗ ಪರಿಸರ, ಅರಣ್ಯ ಸಚಿವಾಲಯ ಈ ಯೋಜನೆಗೆ ಒಪ್ಪಿಗೆ ನೀಡಿದೆ. ತುಮಕೂರು ಘಟಕ ಪ್ರಾರಂಭವಾದರೆ ಸುಮಾರು 4 ಸಾವಿರ ಕ್ಕೂ ಹೆಚ್ಚಿನ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.
ಘಟಕ ನಿರ್ಮಾಣ ಮಾಡುವುದಕ್ಕೆ ಸಂಬಂಧಿಸಿದ ಎಲ್ಲಾ ವಿಚಾರಗಳ ಬಗ್ಗೆ ವಿವರವಾಗಿ ಚರ್ಚೆ ನಡೆಸಿ, ಯೋಜನೆಗೆ ಅನುಮತಿ ನೀಡಲಾಗಿದೆ. ಪರಿಸರ ಮತ್ತು ಅರಣ್ಯ ಸಚಿವಾಲಯ ಸಮಿತಿ ಯೋಜನೆಗೆ ಒಪ್ಪಿಗೆ ನೀಡಿ ಸಚಿವಾಲಯಕ್ಕೆ ವರದಿ ಕಳುಹಿಸಿದೆ..
ಯುಪಿಎ ಸರ್ಕಾರದ 2ನೇ ಅವಧಿಯಲ್ಲಿ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬಿದರೆಹಳ್ಳ ಕಾವಲ್‌ನಲ್ಲಿ ಎಚ್‌ಎಎಲ್ ಲಘು ಹೆಲಕಾಪ್ಟರ್ ಘಟಕ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿತ್ತು. ಘಟಕ ಸ್ಥಾಪನೆಗೆ ಬೀದರ್ ಮತ್ತು ತುಮಕೂರು ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿತ್ತು. ಅಂತಿಮವಾಗಿ ಘಟಕ ಸ್ಥಾಪನೆಗೆ ತುಮಕೂರನ್ನು ಪರಿಗಣಿಸಲಾಗಿತ್ತು.
ಸುಮಾರು 610 ಎಕರೆ ಜಾಗದಲ್ಲಿ ಹೆಲಿಕಾಪ್ಟರ್ ಘಟಕ ನಿರ್ಮಾಣವಾಗಲಿದ್ದು ಯೋಜನೆಗೆ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಸುಮಾರು 6300 ಕೋಟಿ ವೆಚ್ಚದಲ್ಲಿ ಈ ಘಟಕ ನಿರ್ಮಾಣವಾಗುತ್ತಿದೆ. ವರ್ಷಕ್ಕೆ 75 ಹೆಲಿಕಾಪ್ಟರ್ ಉತ್ಪಾದನೆ ಮಾಡುವ ಸಾಮರ್ಥ್ಯದ ಘಟಕವನ್ನು ಇಲ್ಲಿ ನಿರ್ಮಿಸಲಾಗುತ್ತದೆ. ಬಿಡಿಭಾಗಗಳ ಜೋಡಣೆ, ರನ್ ವೇ, ಏರ್ ಟ್ರಾಫಿಕ್ ಕಂಟ್ರೋಲ್ ವ್ಯವಸ್ಥೆ, ಟೌನ್ ಶಿಪ್ ಅನ್ನು ಘಟಕ ಒಳಗೊಂಡಿರುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪರಿಸರTumkurHindustan Aeronautical Limitedhelicopter unitMinistry of Environment and Forestತುಮಕೂರುಹಿಂದೂಸ್ತಾನ್ ಏರೋನಾಟಿಕಲ್ ಲಿಮಿಟೆಡ್ಹೆಲಿಕಾಪ್ಟರ್ ಘಟಕಅರಣ್ಯ ಸಚಿವಾಲಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


