ಸಂಸದ ಪ್ರತಾಪ್ ಸಿಂಹ, ಅಂಕಣಕಾರ ಚಕ್ರವರ್ತಿ ಸೂಲಿಬೆಲೆಗೆ ಜೀವ ಬೆದರಿಕೆ
ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ವ್ಯಕ್ತಿಯೊಬ್ಬ, ಮೈಸೂರು ಸಂಸದ ಪ್ರತಾಪ್ ಸಿಂಹ ಹಾಗೂ ಅಂಕಣಕಾರ ಚಕ್ರವರ್ತಿ ಸೂಲಿಬೆಲೆಯವರಿಗೆ ಜೀವ ಬೆದರಿಕೆ ಹಾಕಿದ್ದಾನೆ.

Published On :
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ವ್ಯಕ್ತಿಯೊಬ್ಬ, ಮೈಸೂರು ಸಂಸದ ಪ್ರತಾಪ್ ಸಿಂಹ ಹಾಗೂ ಅಂಕಣಕಾರ ಚಕ್ರವರ್ತಿ ಸೂಲಿಬೆಲೆಯವರಿಗೆ ಜೀವ ಬೆದರಿಕೆ ಹಾಕಿದ್ದಾನೆ.
ನನ್ನ ಪ್ರಕಾರ ಗೌರಿ ಲಂಕೇಶ್ ಅಂತಹವರ ಸಾವಿಗೆ ಚಕ್ರವರ್ತಿ ಸೂಲಿಬೆಲೆ ಹಾಗೂ ಪ್ರತಾಪ್ ಸಿಂಹ ಅವರ ದ್ವೇಷದ ಮಾತುಗಳೇ ಕಾರಣ ಎಂದು ಟ್ವೀಟ್ ಮಾಡಿರುವ ಅನಂತಮೂರ್ತಿ ಬಿ ಹೆಸರಿನ ವ್ಯಕ್ತಿ “ನಾ ಮುಂದೆ ಒಂದು ದಿನ.. ಆದರೆ ಮುಗಿಸಿ ಚಕ್ರವರ್ತಿ ಸೂಲಿಬೆಲೆ ಮತ್ತು ಪ್ರತಾಪ್ ಸಿಂಹ ಇವರನ್ನ…” ಎಂದು ಟ್ವೀಟ್ ಮಾಡಿದ್ದಾನೆ.

ಟ್ವಿಟರ್ ನಲ್ಲಿ ಬೆದರಿಕೆ ಹಾಕಿರುವುದಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದು ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


