ರಾಜ್ಯ

ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಗೌರಿ ಲಂಕೇಶ್!

ದುಷ್ಕರ್ಮಿಗಳ ಗುಂಡೇಟಿಗೆ ಎದೆಯೊಡ್ಡು ಸಾವನ್ನಪ್ಪಿದ್ದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ.

Published On :
ಬೆಂಗಳೂರು: ದುಷ್ಕರ್ಮಿಗಳ ಗುಂಡೇಟಿಗೆ ಎದೆಯೊಡ್ಡು ಸಾವನ್ನಪ್ಪಿದ್ದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ.
ಗೌರಿ ಲಂಕೇಶ್ ಅವರ ಆಸೆಯಂತೆಯೇ ಅವರ ಕಣ್ಣುಗಳನ್ನು ಬೆಂಗಳೂರಿನ ಮಿಂಟೋ ಆಸ್ಪತ್ರೆಗೆ ದಾನ ಮಾಡಲಾಗಿದೆ. ಗೌರಿ ಲಂಕೇಶ್ ಅವರ ಸಹೋದರ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ನೇತೃತ್ವದಲ್ಲಿ ಗೌರಿ ಲಂಕೇಶ್  ಅವರ ಕಣ್ಣುಗಳನ್ನು ಮಿಂಟೋ ಆಸ್ಪತ್ರೆಗೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸ್ವತಃ ಇಂದ್ರಜಿತ್ ಲಂಕೇಶ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, "ಗೌರಿ ಲಂಕೇಶ್ ಅವರ ಆಸೆಯಂತೆ ಅವರ ಎರಡೂ ಕಣ್ಣುಗಳನ್ನು  ದಾನ ಮಾಡಲಾಗಿದೆ ಎಂದು ಹೇಳಿದ್ದಾರೆ.
ಅಲ್ಲದೆ ನೇತ್ರದಾನ ಕುರಿತಂತೆ ಮಾಧ್ಯಮಗಳಿಗೆ ನೇತ್ರದಾನ ಪ್ರಮಾಣಪತ್ರವನ್ನೂ ಪ್ರದರ್ಶನ ಮಾಡಿದ್ದಾರೆ. ಈ ವೇಳೆ ಹತ್ಯೆ ಕುರಿತಂತೆ ಮಾತನಾಡಿದ ಇಂದ್ರಜಿತ್ ಲಂಕೇಶ್ ಅವರು, ತಮ್ಮ ಸಹೋದರಿ ಗೌರಿ ಲಂಕೇಶ್ ಸಾವಿಗೆ  ನ್ಯಾಯ ಸಿಗಬೇಕು. ಹತ್ಯೆ ನಡೆದಿರುವ ಬಗ್ಗೆ ಸೂಕ್ತ ತನಿಖೆ ನಡೆಸುವ ಭರವಸೆಯನ್ನು ಕಮಿಷನರ್ ನೀಡಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.