ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಅಮೆರಿಕ ಖಂಡನೆ
ಹಿರಿಯ ಪತ್ರಕರ್ತೆ, ಸಾಹಿತಿ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರ ಹತ್ಯೆಯನ್ನು ಅಮೆರಿಕ ತೀವ್ರ ಖಂಡಿಸಿದೆ.

Published On :
ಚೆನ್ನೈ: ಹಿರಿಯ ಪತ್ರಕರ್ತೆ, ಸಾಹಿತಿ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರ ಹತ್ಯೆಯನ್ನು ಅಮೆರಿಕ ತೀವ್ರ ಖಂಡಿಸಿದೆ.
ಈ ಸಂಬಂಧ ಚೆನ್ನೈನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಬೆಂಗಳೂರಿನಲ್ಲಿ ನಡೆದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸುವುದಾಗಿ ಮತ್ತು ಭಾರತ ಹಾಗೂ ವಿಶ್ವಾದ್ಯಂತ ಮಾಧ್ಯಮ ಸ್ವಾತಂತ್ರ್ಯ ಪ್ರತಿಪಾದಕರ ಜತೆ ಕೈಜೋಡಿಸುವುದಾಗಿ ತಿಳಿಸಿದೆ. ಅಲ್ಲದೆ ಗೌರಿ ಲಂಕೇಶ್ ಸಾವಿಗೆ ಸಂತಾಪ ಸೂಚಿಸಿದೆ.
ಗೌರಿ ಲಂಕೇಶ್ ಅವರನ್ನು ನಿನ್ನೆ ರಾತ್ರಿ ಅವರ ರಾಜರಾಜೇಶ್ವರಿ ನಗರದ ಮನೆ ಮುಂದೆಯೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಹಿರಿಯ ಪತ್ರಕರ್ತೆಯ ಹತ್ಯೆಗೆ ದೇಶಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


