ಗೌರಿ ಲಂಕೇಶ್ ಹತ್ಯೆ ಆರೋಪಿಗಳನ್ನು ಹಿಡಿಯಲು ಎಲ್ಲಾ ಕೋನಗಳಿಂದ ತನಿಖೆ: ಬೆಂಗಳೂರು ಕಮಿಷನರ್
ಹಿರಿಯ ಪತ್ರಕರ್ತೆ, ಸಾಹಿತಿ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ಪತ್ತೆಗಾಗಿ ಎಲ್ಲಾ ಕೋನಗಳಿಂದಲು ತನಿಖೆ ನಡೆಸಲಾಗುವುದು..

Published On :
ಬೆಂಗಳೂರು: ಹಿರಿಯ ಪತ್ರಕರ್ತೆ, ಸಾಹಿತಿ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ಪತ್ತೆಗಾಗಿ ಎಲ್ಲಾ ಕೋನಗಳಿಂದಲು ತನಿಖೆ ನಡೆಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಸಿಸಿಟಿವಿ ದೃಶ್ಯಾವಳಿ ಆಧರಿಸಿ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಇನ್ನು ಗೌರಿ ಲಂಕೇಶ್ ರನ್ನು ಗುಂಡಿಟ್ಟು ಹತ್ಯೆಗೈದ ವೇಳೆ ಗುಂಡಿನ ಶಬ್ಧ ಕೇಳಿ ಹೊರಬಂದ ನೆರೆಹೊರೆಯವರಿಂದ ಕೆಲವೊಂದು ಮಹತ್ವದ ಸಾಕ್ಷ್ಯಗಳನ್ನು ಕಲೆಹಾಕಲಾಗಿದೆ ಎಂದರು.
ಇನ್ನು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಗೌರಿ ಲಂಕೇಶ್ ಅವರು ಮನೆಯ ಮುಂದೆ ಕಾರು ನಿಲ್ಲಿಸಿ ಗೇಟ್ ತೆರೆಯುತ್ತಿದ್ದಾಗ ವ್ಯಕ್ತಿಯೊರ್ವ ತಲೆಗೆ ಹೆಲ್ಮೆಟ್ ಧರಿಸಿ ಆಕೆಯ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾನೆ ಎಂದು ಸುನೀಲ್ ಕುಮಾರ್ ಅವರು ಹೇಳಿದ್ದಾರೆ.
ಇದೇ ವೇಳೆ ಪೊಲೀಸರು ಗೌರಿ ಲಂಕೇಶ್ ಅವರ ಸಾವಿನ ಸುದ್ದಿಗೆ ಫೇಸ್ ಬುಕ್ ನಲ್ಲಿ ಹರ್ಷ ವ್ಯಕ್ತಪಡಿಸಿದ್ದವರನ್ನು ಕರೆಸಿ ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣ ಕರ್ನಾಟಕ ಪೊಲೀಸರಿಗೆ ದೊಡ್ಡ ಸವಾಲಿನ ಕೆಲಸವಾಗಿದೆ. ಪ್ರಕರಣದ ತನಿಖೆಗೆ ನಿರ್ದಿಷ್ಟ ಸಮಯ ನಿಗದಿಪಡಿಸಲಾಗಿಲ್ಲ. ಕೂಡಲೇ ಆರೋಪಿಗಳನ್ನು ಪತ್ತೆ ಹಚ್ಚುತ್ತೇವೆ ಎಂದು ಪೊಲೀಸ್ ಆಯುಕ್ತರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


