ರಾಜ್ಯ

ನಟ ಚೇತನ್‌ಗೆ ಜೀವ ಬೆದರಿಕೆ: ರಕ್ಷಣೆಗಾಗಿ ಪೊಲೀಸರ ಮೊರೆ

ಸ್ಯಾಂಡಲ್ವುಡ್ ನಟ ಚೇತನ್ ಅವರು ತಮಗೆ ಜೀವ ಬೆದರಿಕೆ ಇದ್ದು ಸೂಕ್ತ ರಕ್ಷಣೆ ಒದಗಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದಾರೆ...

ನಟ ಚೇತನ್‌ಗೆ ಜೀವ ಬೆದರಿಕೆ: ರಕ್ಷಣೆಗಾಗಿ ಪೊಲೀಸರ ಮೊರೆ
ಚೇತನ್
Published On :
ಬೆಂಗಳೂರು: ಸ್ಯಾಂಡಲ್ವುಡ್ ನಟ ಚೇತನ್ ಅವರು ತಮಗೆ ಜೀವ ಬೆದರಿಕೆ ಇದ್ದು ಸೂಕ್ತ ರಕ್ಷಣೆ ಒದಗಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದಾರೆ. 
ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಬೆದರಿಕೆ ಸಂದೇಶಗಳನ್ನು ಪ್ರಕಟಿಸುತ್ತಿದ್ದಾರೆ. ಅಲ್ಲದೆ ನನ್ನ ಫೋನ್ ಗೆ ಜೀವ ಬೆದರಿಕೆ ಕರೆಗಳು ಹೆಚ್ಚಾಗಿ ಬರುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್ ಅವರಿಗೆ ದೂರು ನೀಡಿದ್ದಾರೆ. 
ಪ್ರಗತಿಪರ ಚಿಂತನೆ, ವಿಚಾರಧಾರೆ, ಹೋರಾಟ ನಡೆಸುತ್ತಿರುವ ನನಗೂ ಜೀವ ಬೆದರಿಕೆ ಇದೆ. ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಬಳಿಕ ಪ್ರಗತಿಪರ ಚಿಂತಕರು, ಹೋರಾಟಗಾರರಿಗೆ ರಕ್ಷಣೆ ನೀಡುವ ಬಗ್ಗೆ ಸರ್ಕಾರ ಭರವಸೆ ನೀಡಿರುವುದರಿಂದ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿರುವುದಾಗಿ ಚೇತನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. 
ಈ ಹಿಂದೆ ದಿಡ್ಡಳ್ಳಿ ನಿರಾಶ್ರಿತರ ಪರ ಹೋರಾಟ ನಡೆಸಿದ್ದ ಚೇತನ್ ಇತ್ತೀಚೆಗೆ ವೀರಶೈವ ಸಭೆಯಲ್ಲಿ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.