ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ನಳಿನ್ ಕುಮಾರ್ ಕಟೀಲ್ ವಿರುದ್ಧ ಪ್ರಕರಣ
ಬಿಜೆಪಿ ಯುವಮೋರ್ಚಾ ಮಂಗಳೂರು ಚಲೊ ಸಂದರ್ಭದಲ್ಲಿ ಬಂಧಿಸಿದ ಕಾರ್ಯಕರ್ತರ ಬಿಡುಗಡೆ ವಿಚಾರದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

Published On :
ಮಂಗಳೂರು: ಬಿಜೆಪಿ ಯುವಮೋರ್ಚಾ ಮಂಗಳೂರು ಚಲೊ ಸಂದರ್ಭದಲ್ಲಿ ಬಂಧಿಸಿದ ಕಾರ್ಯಕರ್ತರ ಬಿಡುಗಡೆ ವಿಚಾರದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಕದ್ರಿ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಮಾರುತಿ ನಾಯ್ಕ ಅವರೊಂದಿಗೆ ಒರಟಾಗಿ ವರ್ತಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಮಂಗಳೂರು ಚಲೋ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರಲ್ಲಿ ಕೆಲವರನ್ನು ಬಂಧಿಸಿ ಕದ್ರಿಯ ಗೋರಕ್ಷನಾಥ ಸಭಾಂಗಣಕ್ಕೆ ಕರೆತಂದು ನಿಯಮಾವಳಿಯಂತೆ ಸಹಿ ತೆಗೆದುಕೊಳ್ಳಲಾಗುತ್ತಿತ್ತು. ಈ ವೇಳೆ ಸಭಾಂಗಣಕ್ಕೆ ಆಗಮಿಸಿದ ಸಂಸದ ನಳಿನ್ ಕುಮಾರ್ ಕದ್ರಿ ಇನ್‌ಸ್ಪೆಕ್ಟರ್ ಮಾರುತಿ ನಾಯ್ಕ ಜತೆ ಒರಟಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.
ಕಾರ್ಯಕರ್ತರನ್ನು ತಕ್ಷಣ ಬಿಡುಗಡೆ ಮಾಡದಿದ್ದರೆ ಜಿಲ್ಲಾ ಬಂದ್ ಗೆ ಕರೆ ನೀಡುವುದಾಗಿ ಬೆದರಿಕೆ ಹಾಕಿದ್ದ ಕಾರಣ ಪೊಲೀಸರು ನಳಿನ್ ಮತ್ತಿತರರ ಮೇಲೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Nalin Kumar KateelMP Nalin KumarKadri police stationBJP YuvamorchaMangalore Chalo.ಬಿಜೆಪಿ ಯುವಮೋರ್ಚಾಮಂಗಳೂರು ಚಲೊಸಂಸದ ನಳಿನ್ ಕುಮಾರ್ ಕಟೀಲ್ಕದ್ರಿ ಪೊಲೀಸ್ ಠಾಣೆಮಾರುತಿ ನಾಯ್ಕ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


