ವಿಜಯಪುರದಲ್ಲಿ ಮಳೆ ಅವಘಡ: ಪ್ರತ್ಯೇಕ ಘಟನೆಗಳಲ್ಲಿ ನಾಲ್ವರ ಸಾವು
ಕಳೆದ ಎರಡು ದಿನಗಳಿಂದ ಸತತವಾಗಿ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದ ಪ್ರತ್ಯೇಕ ಘಟನೆಗಳಲ್ಲಿ, ಇಂಡಿ ತಾಲ್ಲೂಕಿನಲ್ಲಿ ನಾಲ್ವರು ಮೃತಪಟ್ಟಿದ್ದಾರೆ....

Published On :
ವಿಜಯಪುರ: ಕಳೆದ ಎರಡು ದಿನಗಳಿಂದ ಸತತವಾಗಿ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದ ಪ್ರತ್ಯೇಕ ಘಟನೆಗಳಲ್ಲಿ, ಇಂಡಿ ತಾಲ್ಲೂಕಿನಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಹಳಗುಣಕಿಯ ರಾಚಪ್ಪ ಗಣಪತಿ ಸುತಾರ, ಸಿದ್ದವ್ವ ರಾಚಪ್ಪ ಸುತಾರ, ಜೇವೂರಿನ ಕರಬಸಪ್ಪ ಪೀರಪ್ಪ ಆಕಳವಾಡಿ, ಇಂದ್ರಾಬಾಯಿ ಕರಬಸಪ್ಪ ಆಕಳವಾಡಿ ಮೃತ ದುರ್ದೈವಿಗಳು.
ಸತತ ಮಳೆಯಿಂದಾಗಿ ಗೋಡೆಗೆ ತೇವಾಂಶ ಹತ್ತಿತ್ತು. ಇದರ ಜತೆಗೆ ಎರಡು ದಿನ ಸುರಿದ ಮಳೆಗೆ ಗೋಡೆ ನೆನೆದು ಹೊರಭಾಗಕ್ಕೆ ಹೊಂದಿಕೊಂಡಂತಿದ್ದ ಶೆಡ್ ಕುಸಿದು ಬಿದ್ದಿದೆ. ಇದರ ಪರಿಣಾಮ ಒಳಭಾಗದಲ್ಲಿ ಮಲಗಿದ್ದ ದಂಪತಿ ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ವಿಜಯಪುರ ಜಿಲ್ಲೆಯಾದ್ಯಂತ ಗುರುವಾರ ರಾತ್ರಿ ಭಾರಿ ಮಳೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


