ರಾಜ್ಯ

ಗೌರಿ ಲಂಕೇಶ್ ಹತ್ಯೆ: ಹಂತಕರ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಿಸಿದ ಸರ್ಕಾರ

ಹಿರಿಯ ಪತ್ರಕರ್ತೆ ಮತ್ತು ವಿಚಾರವಾದಿ ಗೌರಿ ಲಂಕೇಶ್ ಅವರ ಹತ್ಯೆ ಮಾಡಿದ ಹಂತಕರ ಸುಳಿವು ನೀಡಿದವರಿಗೆ 10 ಲಕ್ಷ ರು.ಬಹುಮಾನ ನೀಡುವುದಾಗಿ ರಾಜ್ಯ ಸರ್ಕಾರ ಶುಕ್ರವಾರ ಘೋಷಣೆ ಮಾಡಿದೆ.

ಗೌರಿ ಲಂಕೇಶ್ ಹತ್ಯೆ: ಹಂತಕರ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಿಸಿದ ಸರ್ಕಾರ
ಸಂಗ್ರಹ ಚಿತ್ರ
Published On :
ಬೆಂಗಳೂರು: ಹಿರಿಯ ಪತ್ರಕರ್ತೆ ಮತ್ತು ವಿಚಾರವಾದಿ ಗೌರಿ ಲಂಕೇಶ್ ಅವರ ಹತ್ಯೆ ಮಾಡಿದ ಹಂತಕರ ಸುಳಿವು ನೀಡಿದವರಿಗೆ 10 ಲಕ್ಷ ರು.ಬಹುಮಾನ ನೀಡುವುದಾಗಿ ರಾಜ್ಯ ಸರ್ಕಾರ ಶುಕ್ರವಾರ ಘೋಷಣೆ ಮಾಡಿದೆ.
ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಹಂತಕರ ಸುಳಿವು ನೀಡಿದವರಿಗೆ 10 ಲಕ್ಷ  ಬಹುಮಾನ ನೀಡುವುದಾಗಿ ರಾಜ್ಯ ಗೃಹ ಸಚಿವ  ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯರೊಂದಿಗೆ ಎಸ್ ಐಟಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ರಾಮಲಿಂಗಾ ರೆಡ್ಡಿ ಅಧಿಕಾರಿಗಳಿಂದ ಪ್ರಕರಣದ ತನಿಖೆಯ ಪ್ರಗತಿ ಕುರಿತು ಚರ್ಚಿಸಿದರು.
ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತನಿಖೆಯಲ್ಲಿ ಯಾವುದೇ ರೀತಿಯ ಹಿನ್ನಡೆಯಾಗಿಲ್ಲ. ಇಂದು ಖುದ್ಧು ಸಿಎಂ  ಸಿದ್ದರಾಮಯ್ಯ ಅವರು ತನಿಖಾಧಿಕಾರಿಗಳ ಭೇಟಿ ಮಾಡಿ ತನಿಖಾ ಪ್ರಗತಿ ಪರಿಶೀಲಿಸಿದ್ದಾರೆ. ತನಿಖೆಯಲ್ಲಿ ಅಗತ್ಯ ಬಿದ್ದರೆ ಹೆಚ್ಚುವರಿ ಸಿಬ್ಬಂದಿಗಳನ್ನು ಬಳಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಇನ್ನು ಹಂತಕರ ಸುಳಿವು  ನೀಡಿದವರಿಗೆ ಸರ್ಕಾರದ ವತಿಯಿಂದ 10 ಲಕ್ಷ ಬಹುಮಾನ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
ಇದೇ ವೇಳೆ ಬಿಜೆಪಿ ಮುಖಂಡ ಜೀವರಾಜ್ ಆಳ್ವ ಅವರ ವಿವಾದಾತ್ಮತಕ ಹೇಳಿಕೆ ಸಂಬಂಧವೂ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.