ರಾಜ್ಯ

ಲಿಮ್ಕಾ ದಾಖಲೆಗೆ ಸೇರ್ಪಡೆಗೊಂಡ ದೇಶದ ಪ್ರಥಮ ಹೊಗೆರಹಿತ ಗ್ರಾಮ

ಚಿಕ್ಕಬಳ್ಳಾಪುರ ಜಿಲ್ಲೆಯ ವೈಚಕೂರಹಳ್ಳಿ 2017ನೇ ಸಾಲಿನ ‘ದೇಶದ ಮೊದಲ ಹೊಗೆರಹಿತ ಗ್ರಾಮ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಲಿಮ್ಕಾ ದಾಖಲೆಗೆ ಸೇರ್ಪಡೆಯಾಗಿದೆ.

ಲಿಮ್ಕಾ ದಾಖಲೆಗೆ ಸೇರ್ಪಡೆಗೊಂಡ ದೇಶದ ಪ್ರಥಮ ಹೊಗೆರಹಿತ ಗ್ರಾಮ
ಲಿಮ್ಕಾ ದಾಕಲೆಗೆ ಸೇರ್ಪಡೆಗೊಂಡ ದೇಶದ ಪ್ರಥಮ ಹೊಗೆರಹಿತ ಗ್ರಾಮ
Published On :
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ವೈಚಕೂರಹಳ್ಳಿ 2017ನೇ ಸಾಲಿನ ‘ದೇಶದ ಮೊದಲ ಹೊಗೆರಹಿತ ಗ್ರಾಮ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಲಿಮ್ಕಾ ದಾಖಲೆಗೆ ಸೇರ್ಪಡೆಯಾಗಿದೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಉಜ್ವಲ ಯೋಜನೆ (ಪಿಎಂಯುವೈ)ಅಡಿಯಲ್ಲಿ  ಶೇ. 100ರಷ್ಟು ಎಲ್‌ ಪಿಜಿ ಅಡುಗೆ ಅನಿಲವನ್ನು ಬಳಕೆ ಮಾಡುವ ಮೂಲಕ ಲಿಮ್ಕಾ ದಾಖಲೆ ನಿರ್ಮಿಸಿದೆ ಎಂದು ಇಂಡಿಯನ್‌ ಆಯಿಲ್‌ ಸಂಸ್ಥೆ ತಿಳಿಸಿದೆ.
‘ಗ್ರಾಮೀಣ ಪ್ರದೇಶದ ಜನರ ಜೀವನಮಟ್ಟ ಸುಧಾರಣೆಗೆ ಈ ದಾಖಲೆ ನಮಗೆ ಮತ್ತಷ್ಟು ಪ್ರೇರಣೆಯಾಗಲಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯಲ್ಲಿ ರಾಜ್ಯದಲ್ಲಿ ಈ ವರೆಗೆ 7 ಲಕ್ಷ ಅಡುಗೆ ಅನಿಲ ಸಿಲಿಂಡರ್‌ಗಳಿಗೆ ಅನುಮತಿ ನೀಡಲಾಗಿದ್ದು, ಅದರಲ್ಲಿ 5.5 ಲಕ್ಷ ಸಿಲಿಂಡರ್‌ಗಳಿಗೆ ಸಂಪರ್ಕ ಕಲ್ಪಿಸಲಾಗಿದೆ’ ಎಂದು ಇಂಡಿಯನ್‌ ಆಯಿಲ್‌ ಸಂಸ್ಥೆಯ ರಾಜ್ಯ ಸಂಯೋಜಕ ಎಸ್‌. ವರದಾಚಾರಿ ತಿಳಿಸಿದ್ದಾರೆ.
ವೈಚಕೂರಹಳ್ಳಿ ಗ್ರಾಮದ ಎಲ್ಲ ಮನೆಗಳಲ್ಲೂ ಎಲ್‌ ಪಿಜಿ(ಅಡುಗೆ ಅನಿಲ) ಬಳಸುವ ಮೂಲಕ ಹೊಗೆ ರಹಿತ ಗ್ರಾಮವಾಗಿ ಗುರುತಿಸಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.