ಸೆ.13ರವರೆಗೂ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ
ರಾಜ್ಯದಲ್ಲಿ ಕಳೆದೊಂದು ವಾರದಿಂದ ಮುಂಗಾರು ಚುರುಕಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸೆಪ್ಟೆಂಬರ್ 13ರವೆರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Published On :
ಬೆಂಗಳೂರು: ರಾಜ್ಯದಲ್ಲಿ ಕಳೆದೊಂದು ವಾರದಿಂದ ಮುಂಗಾರು ಚುರುಕಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸೆಪ್ಟೆಂಬರ್ 13ರವೆರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಪತ್ರಿಕೆಯೊಂದು ವರದಿ ಮಾಡಿರುವಂತೆ ಬೆಂಗಳೂರು ಮಾತ್ರವಲ್ಲದೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಪ್ಟೆಂಬರ್ 13ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂಬ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಸೆಪ್ಟೆಂಬರ್ 9ರಂದು ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಇಲಾಖೆ ನೀಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 10ರಿಂದ 12ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 12ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಇಂದೂ ಭಾರಿ ಮಳೆ ಸಂಭವ
ಭಾನುವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಎಲ್ಲೆಡೆ ಉತ್ತರ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾನುವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಎಲ್ಲೆಡೆ ಉತ್ತರ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


