ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಿದ್ದಗಂಗಾ ಶ್ರೀ ಬೆಂಬಲ: ಎಂ.ಬಿ ಪಾಟೀಲ್-ಶ್ರೀಗಳ ಭೇಟಿ
ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಪ್ರತಿಭಟನೆ ನಡೆಸುತ್ತಿರುವ ಮುಖಂಡರು ತಮ್ಮ ಹೋರಾಟಕ್ಕೆ ತುಮಕೂರಿನ ಸಿದ್ದಗಂಗಾ ಮಠದ ...

Published On :
ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಪ್ರತಿಭಟನೆ ನಡೆಸುತ್ತಿರುವ ಮುಖಂಡರು ತಮ್ಮ ಹೋರಾಟಕ್ಕೆ ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ಬೆಂಬಲ ಸೂಚಿಸಿರುವುದಾಗಿ ಹೇಳಿದ್ದಾರೆ.ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ಭಾನುವಾರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮಿಗಳ ಆಶೀರ್ವಾದ ಪಡೆದರು.
ತಮ್ಮ ಬೇಡಿಕೆಗೆ ಸ್ವಾಮೀಜಿ ತಮ್ಮ ಬೆಂಬಲ ವ್ಯಕ್ತ ಪಡಿಸಿದ್ದಾಗಿ ಪಾಟೀಲ್ ಹೇಳಿದ್ದಾರೆ, ಲಿಂಗಾಯತ ಧರ್ಮವೇ ಅಂತಿಮ. ಇದರಲ್ಲಿ ಯಾವುದೇ ಸಂಶಯ ಬೇಡ. ವೀರಶೈವ ಎಂಬುದು ಇತ್ತೀಚೆಗೆ ಸೇರಿಕೊಂಡಿದೆ ಎಂದು ಶ್ರೀಗಳು ಸ್ಪಷ್ಟ ನುಡಿಗಳಲ್ಲಿ ತಿಳಿಸಿದ್ದಾರೆ ಎಂದು ಪಾಟೀಲ್ ಮಾಧ್ಯಮಗಳಿಗೆ ಹೇಳಿದ್ದಾರೆ.
ಸಿದ್ದಗಂಗಾ ಶ್ರೀಗಳ ಆಶೀರ್ವಾದದಿಂದ ನಾನು ಭಾವುಕನಾಗಿದ್ದೇನೆ. ನನ್ನ ಜೀವನದಲ್ಲಿ ಇದು ಮರೆಯಲಾರದ ದಿನ ಎಂದು ಪಾಟೀಲ್ ಹೇಳಿದ್ದಾರೆ. ನಡೆದಾಡುವ ಬಸವಣ್ಣ ಎಂದೇ ಖ್ಯಾತರಾಗಿರುವ ಶ್ರೀಗಳ ಬೆಂಬಲದಿಂದ ನಮ್ಮ ಹೋರಾಟಕ್ಕೀಗ ಆನೆ ಬಲ ಬಂದಿದೆ. ಅದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಸಿದ್ದಗಂಗಾ ಶ್ರೀಗಳು ಸಮುದಾಯದ ಸರ್ವೋಚ್ಚ ಸ್ವಾಮೀಜಿ. ಇವರ ನಂತರವೇ ಇನ್ನುಳಿದವರು. ಇವರ ಹೇಳಿಕೆಯ ಮುಂದೆ ನಾಡಿನ ಇನ್ನಾವುದೇ ಸ್ವಾಮೀಜಿಗಳ ಮಾತು, ಹೇಳಿಕೆ, ಸ್ಪಷ್ಟನೆ ನಮ್ಮ ಪಾಲಿಗೆ ಗೌಣವಾಗಲಿವೆ. ಯಾರ ಮಾತಿಗೂ ಹೆಚ್ಚು ತಲೆ ಕೆಡಿಸಿಕೊಳ್ಳದೇ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ನಡೆಸುತ್ತಿರುವ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಿದ್ದೇವೆ’ ಎಂದೂ ಅವರು ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ತುಮಕೂರುTumakuruM B Patilಶಿವಕುಮಾರ ಸ್ವಾಮೀಜಿಎಂ.ಬಿ ಪಾಟೀಲ್seer Shivakumara SwamiSeparate Lingayat religionಪ್ರತ್ಯೇಕ ಲಿಂಗಾಯತ ಧರ್ಮ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


