ಬೆಂಗಳೂರು: ಬರಹಗಾರರು, ಚಿಂತಕರು ಸೇರಿ 16 ಮಂದಿಗೆ ಸರ್ಕಾರದಿಂದ ಪೊಲೀಸ್ ಭದ್ರತೆ
ಜೀವ ಬೆದರಿಕೆ ಹಿನ್ನೆಲೆಯಲ್ಲಿ ನಗರದಲ್ಲಿರುವ ಬರಹಗಾರರು ಹಾಗೂ ಚಿಂತಕರು ಸೇರಿ 16 ಮಂದಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ....

Published On :
ಬೆಂಗಳೂರು: ಜೀವ ಬೆದರಿಕೆ ಹಿನ್ನೆಲೆಯಲ್ಲಿ ನಗರದಲ್ಲಿರುವ ಬರಹಗಾರರು ಹಾಗೂ ಚಿಂತಕರು ಸೇರಿ 16 ಮಂದಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಹಿನ್ನೆಲೆಯಲ್ಲಿ, ಸಿಎಂ ಸಿದ್ದರಾಮಯ್ಯ ನಿರ್ದೇಶನದಂತೆ 16 ಮಂದಿಗೆ ಪೊಲೀಸ್ ಭದ್ರತೆ ನೀಡಲಾಗಿದೆ. ಗುಪ್ತಚರ ಇಲಾಖೆ ವರದಿ ಅನ್ವಯ ಇವರಿಗೆಲ್ಲಾ ಒಬ್ಬೊಬ್ಬ ಸೆಕ್ಯೂರಿಟಿ ಅಧಿಕಾರಿಯನ್ನು ನಿಯೋಜಿಸಲಾಗಿದೆ.
ಸಂಶೋಧಕ ಎಂ.ಚಿದಾನಂದಮೂರ್ತಿ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ, ಗಿರೀಶ್ ಕಾರ್ನಾಡ, ಚಂದ್ರಶೇಖರ ಕಂಬಾರ, ಬರಗೂರು ರಾಮಚಂದ್ರಪ್ಪ, ಡಾ. ಸಿದ್ದಲಿಂಗಯ್ಯ, ಸಿಎಂ ಸಲಹೆಗಾರ ದಿನೇಶ್ ಅಮಿನ್ ಮಟ್ಟು, ನಿವೃತ್ತ ಐಎಎಸ್ ಅಧಿಕಾರಿ ಎಸ್.ಎ ಜಾಮದಾರ್ ಅವರಿಗೆ ಸರ್ಕಾರ ಭದ್ರತೆ ಒದಗಿಸಿದೆ.
ನಿಡುಮಾಮಿಡಿ ಮಠದ ಚೆನ್ನಮಲ್ಲಸ್ವಾಮೀಜಿ, ಚಂದ್ರಶೇಖರ ಪಾಟೀಲ, ಪ್ರಜಾ ಪರಿವರ್ತನಾ ವೇದಿಕೆಯ ಬಿ. ಗೋಪಾಲ, ಸಿ.ಎಸ್. ದ್ವಾರಕನಾಥ್, ಕೆ. ಮರುಳಸಿದ್ದಪ್ಪ, ಬಿ.ಟಿ. ಲಲಿತಾನಾಯಕ್, ಟಿ.ಎನ್. ಸೀತಾರಾಂ, ಕೆ.ಎಸ್. ವಿಮಲಾ, ಅವರಿಗೂ ಪೊಲೀಸ್ ಭದ್ರತೆ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
State Governmentರಾಜ್ಯ ಸರ್ಕಾರwritersಬರಹಗಾರರುthinkersಚಿಂತಕರುpolice protectionಪೊಲೀಸ್ ಭದ್ರತೆGauri Lankesh Murderಗೌರಿ ಲಂಕೇಶ್ ಹತ್ಯೆ ಪ್ರಕರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


