ರಾಜ್ಯ

ಸಹೋದ್ಯೋಗಿ ಮೇಲೆ ಅತ್ಯಾಚಾರ; ವೆಬ್‌ಸೈಟ್‌ಗೆ ವಿಡಿಯೋ ಅಪ್ಲೋಡ್; ಬೆಂಗಳೂರು ಟೆಕ್ಕಿ ಬಂಧನ

ಖಾಸಗಿ ಕಂಪನಿಯ ಹಿರಿಯ ಸಾಫ್ಟ್ ವೇರ್ ಎಂಜಿನಿಯರ್ ಒಬ್ಬ ತನ್ನ ಸಹೋದ್ಯೋಗಿಯ ಮೇಲೆ ಅತ್ಯಾಚಾರ ನಡೆಸಿದ ವಿಡಿಯೋವನ್ನು ಪೋರ್ನ್ ವೆಬ್‌ಸೈಟ್‌ಗೆ ಅಪ್ಲೋಡ್ ಮಾಡಿದ್ದು ಇದೀಗ ಟೆಕ್ಕಿ...

ಸಹೋದ್ಯೋಗಿ ಮೇಲೆ ಅತ್ಯಾಚಾರ; ವೆಬ್‌ಸೈಟ್‌ಗೆ ವಿಡಿಯೋ ಅಪ್ಲೋಡ್; ಬೆಂಗಳೂರು ಟೆಕ್ಕಿ ಬಂಧನ
ಅತ್ಯಾಚಾರ
Published On :
ಬೆಂಗಳೂರು: ಖಾಸಗಿ ಕಂಪನಿಯ ಹಿರಿಯ ಸಾಫ್ಟ್ ವೇರ್ ಎಂಜಿನಿಯರ್ ಒಬ್ಬ ತನ್ನ ಸಹೋದ್ಯೋಗಿಯ ಮೇಲೆ ಅತ್ಯಾಚಾರ ನಡೆಸಿದ ವಿಡಿಯೋವನ್ನು ಪೋರ್ನ್ ವೆಬ್‌ಸೈಟ್‌ಗೆ ಅಪ್ಲೋಡ್ ಮಾಡಿದ್ದು ಇದೀಗ ಟೆಕ್ಕಿ ಪೊಲೀಸರ ಅತಿಥಿಯಾಗಿದ್ದಾನೆ.
ಬೆಂಗಳೂರಿನ ಈಜಿಪುರದಲ್ಲಿ ವಾಸವಿದ್ದ ಪಶ್ಚಿಮ ಬಂಗಾಳದ ಅರಿಂದಮ್ ನಾಥ್ ಎಂಬಾತ ತನ್ನ ಜತೆ ಕೆಲಸ ಮಾಡುತ್ತಿದ್ದ ಒಡಿಶಾ ಮೂಲದ ಯುವತಿಯನ್ನು ಪ್ರೀತಿಯ ನೆಪದಲ್ಲಿ ಮನೆಗೆ ಕರೆಸಿಕೊಂಡು ಅತ್ಯಾಚರಿಸಿದ್ದಾನೆ. ಇಷ್ಟೇ ಅಲ್ಲದೆ ಅದನ್ನು ಯುವತಿಗೆ ಗೊತ್ತಾಗದಂತೆ ವಿಡಿಯೋ ಮಾಡಿಕೊಂಡು ಆಕೆಯನ್ನು ತಾನೂ ಕರೆದಾಗಲೆಲ್ಲ ಬರಬೇಕು ಎಂದು ಬ್ಲಾಕ್ ಮೇಲ್ ಮಾಡುತ್ತಿದ್ದ. 
ಇದರಿಂದ ಭಯಗೊಂಡ ಯುವತಿ ಆತ ಕರೆದಾಗಲೆಲ್ಲಾ ಆತನ ಮನೆಗೆ ಹೋಗಿದ್ದಾಳೆ. ಆಕೆಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ಅರಿಂದಮ್ ನಾಥ್ ಕೊನೆಗೆ ಹಣ ನೀಡುವಂತೆ ಬೆದರಿಕೆ ಹಾಕಿದ್ದಾನೆ. ಇದಕ್ಕೆ ಯುವತಿ ಬಗ್ಗದಿದ್ದಾಗ ಸೆಪ್ಟೆಂಬರ್ 4ರಂದು ವಿಡಿಯೋವನ್ನು ಅಪ್ಲೋಡ್ ಮಾಡಿದ್ದಾನೆ. 
ಈ ಸಂಬಂಧ ದೂರು ನೀಡಿದ್ದು ಪೊಲೀಸರು ಕಾಮುಕ ಎಂಜಿನಿಯರ್ ಅರಿಂದಮ್ ನಾಥ್ ನನ್ನು ಬಂಧಿಸಿ ಆತನ ವಿರುದ್ಧ ಐಪಿಸಿ ಸೆಕ್ಷನ್ 376(ಅತ್ಯಾಚಾರ), 384(ಸುಲಿಗೆ), 506(ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.