ಕರ್ನಾಟಕ: ಶೂ ಖರೀದಿ ಅವ್ಯವಹಾರ ಆರೋಪ; ಮುಖ್ಯ ಶಿಕ್ಷಕಿ ಆತ್ಮಹತ್ಯೆ
ಚಿತ್ರದುರ್ಗ ಮೊಲಕಾಲ್ಮುರು ತಾಲೂಕಿನಲ್ಲಿರುವ ರಾಂಪುರ ಗ್ರಾಮದ ಅಕ್ಕಮಹಾದೇವಿ ಕಾಲೋನಿಯಲ್ಲಿನ ತನ್ನ ಮನೆಯಲ್ಲಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ಓರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Published On :
ಚಿತ್ರದುರ್ಗ: ಚಿತ್ರದುರ್ಗ ಮೊಲಕಾಲ್ಮುರು ತಾಲೂಕಿನಲ್ಲಿರುವ ರಾಂಪುರ ಗ್ರಾಮದ ಅಕ್ಕಮಹಾದೇವಿ ಕಾಲೋನಿಯಲ್ಲಿನ ತನ್ನ ಮನೆಯಲ್ಲಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ಓರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿರುವ ಶಿಕ್ಷಕಿ ತಿಪ್ಪೀರಮ್ಮ ಮೊಲಕಲ್ಮುರು ತಾಲ್ಲೂಕಿನ ದೇವಾಸುಮುದ್ರ ಹಳ್ಳಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಆಗಿದ್ದರು.
ಪೊಲೀಸರು ದೂರಿನ ಪ್ರಕಾರ, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯ ಲಿಂಗಪ್ಪ ಮತ್ತು ಸಹ-ಶಿಕ್ಷಕರಾದ ಸವಿತಾ, ಶಂತಮ್ಮ ಮತ್ತು ರಮೇಶ್ ಅವರು ಮುಖ್ಯ ಶಿಕ್ಷಕಿಗೆ ದಿನನಿತ್ಯ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.
ಶಿಕ್ಷಕಿಯ ಪತಿ ಪಾತಣ್ನ ನೀಡಿದ ದೂರಿನಂತೆ, ಶಿಕ್ಷಕಿ, ವಿದ್ಯಾರ್ಥಿಗಳ ಶೂ ಖರೀದಿಯಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪವಿದೆ. ತನ್ನ ಪತ್ನಿಯ ಮೇಲೆ ವ್ಯಥಾ ಸುಳ್ಳು ಆರೋಪ ಹೊರಿಸಲಾಗಿತ್ತು. ಈ ಆರೋಪದಿಂದ ಮನನೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಈ ಸಂಬಂಧ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೋಲೀಸ್ ತನಿಖೆ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಸheadmistress of a government schoolheadmistress committed suicideRampura villageMolakalmuruGovernment Higher Primary School Devasamudra villageಮೊಲಕಾಲ್ಮುರುರಾಂಪುರ ಗ್ರಾಮ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


