ಟಿಟಿವಿ ದಿನಕರನ್ ಬೆಂಬಲಿತ ಶಾಸಕರು ತಂಗಿದ್ದ ರೆಸಾರ್ಟ್ ಮೇಲೆ ಪೊಲೀಸ್ ದಾಳಿ
ಎಐಎಡಿಎಂಕೆ ಪಕ್ಷದಿಂದ ವಿಕೆ ಶಶಿಕಲಾ ಹಾಗೂ ಟಿಟಿವಿ ದಿನಕರನ್ ಅವರನ್ನು ವಜಾ ಮಾಡಿದ ಬೆನ್ನಲ್ಲೇ ಟಿಟಿವಿ ದಿನಕರನ್ ಬೆಂಬಲಿತ ಶಾಸಕರ...

Published On :
ಸೋಮವಾರಪೇಟೆ(ಕೊಡಗು): ಎಐಎಡಿಎಂಕೆ ಪಕ್ಷದಿಂದ ವಿಕೆ ಶಶಿಕಲಾ ಹಾಗೂ ಟಿಟಿವಿ ದಿನಕರನ್ ಅವರನ್ನು ವಜಾ ಮಾಡಿದ ಬೆನ್ನಲ್ಲೇ ಟಿಟಿವಿ ದಿನಕರನ್ ಬೆಂಬಲಿತ ಶಾಸಕರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.
ಚೆನ್ನೈನಲ್ಲಿರುವ ಎಐಎಡಿಎಂಕೆ ಪ್ರಧಾನ ಕಚೇರಿಯಲ್ಲಿ ನಡೆದಿದ್ದ ಸಾಮಾನ್ಯ ಸಭೆಯಲ್ಲಿ ಈ ಹಿಂದೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದ ಶಶಿಕಲಾ ಮತ್ತು ಉಪ ಕಾರ್ಯದರ್ಶಿ ಸ್ಥಾನದಿಂದ ಟಿಟಿವಿ ದಿನಕರನ್ ರನ್ನು ವಜಾ ಮಾಡಲಾಗಿತ್ತು.
ಪಕ್ಷದಿಂದ ವಿಕೆ ಶಶಿಕಲಾ ಹಾಗೂ ಟಿಟಿವಿ ದಿನಕರನ್ ಅವರನ್ನು ವಜಾ ಮಾಡಿದ ಬೆನ್ನಲ್ಲೇ ಹೈಡ್ರಾಮಾ ನಡೆದಿದ್ದು, ಕರ್ನಾಟಕದ ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿನ ಪ್ಯಾಡಿಂಗ್ಟನ್ ರೆಸಾರ್ಟ್ ನಲ್ಲಿ ತಂಗಿದ್ದ ಟಿಟಿವಿ ದಿನಕರನ್ ಬೆಂಬಲಿತ ಶಾಸಕರ ಮೇಲೆ ತಮಿಳುನಾಡು ಪೊಲೀಸರು ದಾಳಿ ನಡೆಸಿದ್ದಾರೆ. ಸುಮಾರು 200 ಮಂದಿ ಪೊಲೀಸರು ರೆಸಾರ್ಟ್ ಅನ್ನು ಸುತ್ತುವರೆದು ದಾಳಿ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
AIADMKChennaiಚೆನ್ನೈಎಐಎಡಿಎಂಕೆKodaguಕೊಡಗುಶಶಿಕಲಾSasikalaTamil Nadu politicsಟಿಟಿವಿ ದಿನಕರನ್TTV Dinakaranತಮಿಳುನಾಡು ರಾಜಕೀಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


