ರಾಜ್ಯ

ಗೌರಿ ಲಂಕೇಶ್ ಹತ್ಯೆ ಪ್ರಕರಣ ತನಿಖೆ ನಡೆಸುತ್ತಿರುವ ಎಸ್ಐಟಿಗೆ ಸಿಐಡಿ ಸಹಾಯ

ಹಿರಿಯ ಪತ್ರಕರ್ತೆ, ಸಾಹಿತಿ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಸಿಬಿಐ)ಕ್ಕೆ....

ಗೌರಿ ಲಂಕೇಶ್ ಹತ್ಯೆ ಪ್ರಕರಣ ತನಿಖೆ ನಡೆಸುತ್ತಿರುವ ಎಸ್ಐಟಿಗೆ ಸಿಐಡಿ ಸಹಾಯ
ಗೌರಿ ಲಂಕೇಶ್
Published On :
ಬೆಂಗಳೂರು: ಹಿರಿಯ ಪತ್ರಕರ್ತೆ, ಸಾಹಿತಿ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಸಿಬಿಐ)ಕ್ಕೆ ಸಿಐಡಿ ಸಹಾಯ ಮಾಡಲಿದೆ ಎಂದು ಶುಕ್ರವಾರ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಗೌರಿ ಲಂಕೇಶ್ ಹತ್ಯೆಯ ತನಿಖೆಯ ಭಾಗವಾಗಿ ಹಿರಿಯ ಸಂಶೋಧಕ ಹಾಗೂ ವಿಚಾರವಾದಿ ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆಯ ಮಾಹಿತಿಯನ್ನು ಎಸ್ಐಟಿಯೊಂದಿಗೆ ಸಿಐಡಿ ಹಂಚಿಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.
ವಿಚಾರವಾದಿಗಳಾದ ಗೋವಿಂದ್ ಪನ್ಸಾರೆ, ನರೇಂದ್ರ ದಾಭೋಳ್ಕರ್ ಹಾಗೂ ಎಂ.ಎಂ. ಕಲಬುರ್ಗಿ ಹತ್ಯೆಗೆ ಬಳಿಸಿದ ಪಿಸ್ತೂಲ್ ಮಾದರಿಯ ಪಿಸ್ತೂಲ್ ಅನ್ನೇ ಗೌರಿ ಹತ್ಯೆಗೂ ಬಳಸಲಾಗಿದೆ ಎಂದು ಸಿಐಡಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಸಿಎಚ್ ಪ್ರತಾಪ್ ರೆಡ್ಡಿ ಅವರು ವರದಿಗಾರರಿಗೆ ತಿಳಿಸಿದ್ದಾರೆ.
ಈ ಹಿಂದೆ ನಡೆದ ಮೂವರು ವಿಚಾರವಾದಿಗಳ ಹತ್ಯೆ ಮಾದರಿಯಲ್ಲೇ ಗೌರಿ ಲಂಕೇಶ್ ಹತ್ಯೆ ನಡೆದಿದೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದು ಬಂದಿದೆ. ಹಿಂದಿನ ಪ್ರಕರಣಗಳಲ್ಲೂ ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಬಂದು ವಿಚಾರವಾದಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಕಳೆದ ಸೆಪ್ಟೆಂಬರ್ 5ರಂದೂ ದ್ವಿಚಕ್ರ ವಾಹನದಲ್ಲಿ ಆಗಮಿಸಿದ ದುಷ್ಕರ್ಮಿಗಳು ಗೌರಿ ಲಂಕೇಶ್ ಅವರನ್ನು ಅವರ ರಾಜರಾಜೇಶ್ವರಿ ನಗರದ ನಿವಾಸದ ಮುಂದೆ ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎಂದು ರೆಡ್ಡಿ ವಿವರಿಸಿದ್ದಾರೆ.
ಎಂ ಎಂ ಕಲಬುರ್ಗಿ ಅವರನ್ನು ಹತ್ಯೆ ಮಾಡಿದ ತಂಡವೇ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದೆ ಎಂದು ಈಗಲೇ ಹೇಳುವುದು ಕಷ್ಟ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.