ಗೌರಿ ಲಂಕೇಶ್ ಹತ್ಯೆ ಪ್ರಕರಣ: ಎಸ್ ಐಟಿ ತನಿಖೆಗೆ 'ಅಮ್ಮ' ನ ಸಹಮತ, ನನಗೂ ಅದೇ ಸಮ್ಮತ- ಇಂದ್ರಜಿತ್
ತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ವಿಶೇಷ ತನಿಖಾ ತಂಡ ತನಿಖೆ ನಡೆಸಬೇಕೆಂಬುದು ನಮ್ಮ ತಾಯಿಯ ಬಯಕೆಯಾಗಿದೆ ಎಂದು ...

Published On :
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ವಿಶೇಷ ತನಿಖಾ ತಂಡ ತನಿಖೆ ನಡೆಸಬೇಕೆಂಬುದು ನಮ್ಮ ತಾಯಿಯ ಬಯಕೆಯಾಗಿದೆ ಎಂದು ಸಹೋದರ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿರುವ ಅವರು, ಎಸ್ ಐಟಿಯಿಂದಲೇ ಪ್ರಕರಣದ ತನಿಖೆ ಮುಂದುವರಿಸಬೇಕೆಂದು ನಮ್ಮ ತಾಯಿ ಇಂದಿರಾ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಹೀಗಿರುವಾಗ ನಾನು ನನ್ನ ತಾಯಿಯ ಇಚ್ಚೆಯ ವಿರುದ್ಧ ಹೋಗಿ ಸಿಬಿಐ ತನಿಖೆಗೆ ಒತ್ತಾಯಿಸುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಎಸ್ ಐಟಿ ತನಿಖೆ ನಡೆಸುತ್ತಿದೆ, ಅವರಿಗೆ ನಾವು ಸಹಕಾರ ನೀಡಬೇಕು ಎಂದು ನಮ್ಮ ತಾಯಿ ಹೇಳಿದ್ದು ನನಗೆ ಸರಿ ಎನಿಸಿತು, ಗೌರಿ ಸಾವಿಗೆ ನಮಗೆ ನ್ಯಾಯ ಬೇಕಷ್ಟೇ ಎಂದು ಹೇಳಿದ್ದಾರೆ.
ಇನ್ನೂ ಎಸ್ ಐಟಿ ನಿಮ್ಮನ್ನು ವಿಚಾರಣೆಗೆ ಒಳಪಡಿಸಿತ್ತೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬುಧವಾರ ತನಿಖಾ ತಂಡ ಮನೆಗೆ ಆಗಮಿಸಿ ಹೇಳಿಕೆ ದಾಖಲಿಸಿಕೊಂಡು ಹೋಗಿದೆ ಎಂದು ತಿಳಿಸಿದರು.
ಎಸ್ ಐಟಿ ತಂಡ ಕವಿತಾ, ನನ್ನ ತಾಯಿ ಮತ್ತು ನನ್ನಿಂದ ಅಧಿಕೃತ ಹೇಳಿಕೆ ಪಡೆದಿದೆ. ಗೌರಿ ಮತ್ತು ನಮ್ಮ ಸಂಬಂಧದ ಬಗ್ಗೆ ಅವರು ಪ್ರಶ್ನೆ ಮಾಡಿದರು. ಅವರಿಗೆ ನಮ್ಮ ವ್ಯವಹಾರಗಳ ಎಲ್ಲಾ ಮಾಹಿತಿಯನ್ನು ನೀಡಿದ್ದೇವೆ ಎಂದು ಹೇಳಿದ ಅವರು, ವಿಚಾರಣೆ ವೇಳೆ ನಾನು ಕುಸಿದು ಬಿದ್ದೆ ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳು ಪ್ರಸಾರ ಮಾಡಿದ ವರದಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ನಾನೊಬ್ಬ ಪತ್ರಕರ್ತ ನನಗೂ ಅಪರಾಧಿ ಯಾರು ಎಂಬುದನ್ನು ತಿಳಿದುಕೊಳ್ಳಬೇಕು, ನಮ್ಮ ತತ್ವ ಸಿದ್ದಾಂತಗಳಲ್ಲಿ ವ್ಯತ್ಯಾಸವಿತ್ತು, ಅದು ಈ 14 ವರ್ಷಗಳಲ್ಲಿ ಬದಲಾಗಿದೆ ಎಂದು ಇಂದ್ರಜಿತ್ ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
SIT probeಇಂದ್ರಜಿತ್ ಲಂಕೇಶ್MotherತಾಯಿIndrajit Lankeshಎಸ್ ಐಟಿ ತನಿಖೆಗೌರಿ ಲಂಕೇಶ್ ಹತ್ಯೆ ಪ್ರಕರಣGauri Lankesh Murder Case
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


