ಅಂಗಡಿ ತೆರವು ವಿರೋಧಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಾಪಾರಿ ಸಾವು, ಭಟ್ಕಳ ಉದ್ವಿಗ್ನ
ಅಕ್ರಮವಾಗಿ ಆಕ್ರಮಿಸಿಕೊಂಡಿದ್ದ 34 ಅಂಗಡಿಗಳನ್ನು ತೆರವುಗೊಳಿಸಲು ಮುಂದಾಗಿದ್ದ ಭಟ್ಕಳ ಪುರಸಭೆ ವಿರುದ್ಧದ ಪ್ರತಿಭಟನೆ ವೇಳೆ....

Published On :
ಭಟ್ಕಳ: ಅಕ್ರಮವಾಗಿ ಆಕ್ರಮಿಸಿಕೊಂಡಿದ್ದ 34 ಅಂಗಡಿಗಳನ್ನು ತೆರವುಗೊಳಿಸಲು ಮುಂದಾಗಿದ್ದ ಭಟ್ಕಳ ಪುರಸಭೆ ವಿರುದ್ಧದ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಶುಕ್ರವಾರ ರಾತ್ರಿ ಪುರಸಭೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ನಗರದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ಮೃತಪಟ್ಟ ವ್ಯಾಪಾರಿ ರಾಮಚಂದ್ರ ನಾಯಕ್ ಅವರ ಮೃತದೇಹವನ್ನು ಇಂದು ಬೆಳಗ್ಗೆ ಭಟ್ಕಳಗೆ ತರಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೊಬಸ್ತ್ ಏರ್ಪಡಿಸಲಾಗಿದೆ. ಅಲ್ಲದೆ ಶಾಲಾ-ಕಾಲೇಜ್ ಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಕಳೆದ ಗುರುವಾರ ಏಕಾಏಕಿ ಅಂಗಡಿ ತೆರವುಗೊಳಿಸಲು ಮುಂದಾದ ಪುರಸಭೆ ವಿರುದ್ಧ ಭಾರಿ ಪ್ರತಿಭಟನೆ ನಡೆಸಿದ ವ್ಯಾಪಾರಿಗಳು, ಪುರಸಭೆ ಕಟ್ಟಡಕ್ಕೆ ಕಲ್ಲು ತೂರಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.
ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಪುರಸಭೆಗೆ ಸೇರಿದ ಮಳಿಗೆಗಳನ್ನು ಅಧಿಕಾರಿಗಳು ತೆರವುಗೊಳಿಸಲು ಮುಂದಾದರು. ಈ ವೇಳೆ ಒಬ್ಬ ಅಂಗಡಿ ಮಾಲೀಕ ರಾಮಚಂದ್ರ ನಾಯಕ್ ಅವರು ಅಂಗಡಿ ತೆರವು ವಿರೋಧಿಸಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ಈ ವೇಳೆ ಅವರನ್ನು ರಕ್ಷಿಸಲು ಹೋದ ಅವರ ಸಹೋದರ ಈಶ್ವರ ನಾಯಕ್ ಕೂಡ ಘಟನೆಯಲ್ಲಿ ಗಾಯಗೊಂಡಿದ್ದರು. ಇದರಿಂದ ರೊಚ್ಚಿಗೆದ್ದ ಜನ ಅಂಗಡಿ ತೆರವು ಕಾರ್ಯವನ್ನು ನಿಲ್ಲಿಸುವಂತೆ ಆಗ್ರಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕbhatkalಭಟ್ಕಳvendor who attempted self-immolation diesಆತ್ಮಹತ್ಯೆಗೆ ಯತ್ನಿಸಿದ್ದ ವ್ಯಾಪಾರಿ ಸಾವು
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


