ಬೆಂಗಳೂರು: ಎಟಿಎಂ ಕಾರ್ಡ್ ವಿವರ ಕದಿಯುತ್ತಿದ್ದ ಇಬ್ಬರು ವಿದೇಶಿಗರ ಬಂಧನ
ಜನರ ಎಟಿಎಂ ಕಾರ್ಡುಗಳ ವಿವರಗಳನ್ನು ಕದಿಯುತ್ತಿದ್ದ, ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕುತ್ತಿದ್ದ ಇಬ್ಬರು ವಿದೇಶಿಗರನ್ನು ಬೆಂಗಳೂರು ಪೋಲೀಸರು ಬಂಧಿಸಿದ್ದಾರೆ.

Published On :
ಬೆಂಗಳೂರು: ಜನರ ಎಟಿಎಂ ಕಾರ್ಡುಗಳ ವಿವರಗಳನ್ನು ಕದಿಯುತ್ತಿದ್ದ, ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕುತ್ತಿದ್ದ ಇಬ್ಬರು ವಿದೇಶಿಗರನ್ನು ಬೆಂಗಳೂರು ಪೋಲೀಸರು ಬಂಧಿಸಿದ್ದಾರೆ.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ಕೋಟಕ್ ಮಹೀಂದ್ರಾ ಬ್ಯಾಂಕ್ ಎಟಿಎಂ ಘಟಕದಲ್ಲಿ ಅಳವಡಿಸಿದ್ದ ಉಪಕರಣಗಳನ್ನು ವಾಪಸ್ ತೆಗೆದುಕೊಂಡು ಹೋಗಲು ಬಂದಿದ್ದ ವೇಳೆ ಈ ಖದೀಮರು ಸೈಬರ್ ಕ್ರೈಂ ಪೊಲೀಸರ ಕೈಗೆ ಸಿಕ್ಕಿದ್ದಾರೆ.
ರೊಮೇನಿಯಾದ ಡಾನ್ ಸ್ಯಾಬಿಯನ್ ಕ್ರಿಶ್ಚಿಯನ್ (40) ಹಾಗೂ ಹಂಗೇರಿಯ ಮಾರೆ ಜಾನೋಸ್ (44) ಬಂಧಿತ ಆರೋಪಿಗಳಾಗಿದ್ದು ಅವರ ಬಳಿ ಇದ್ದ ಸ್ಕಿಮ್ಮರ್ ಉಪಕರಣ, ಪ್ಯಾನಲ್ ಕ್ಯಾಮೆರಾ ಹಾಗೂ ರಹಸ್ಯ ಕ್ಯಾಮೆರಾಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಆಪಾದಿತರು ಎಟಿಎಂ ಘಟಕಗಳಲ್ಲಿ ಸ್ಕಿಮ್ಮರ್ ಉಪಕರಣ ಹಾಗೂ ರಹಸ್ಯ ಕ್ಯಾಮೆರಾಗಳನ್ನು ಹಾಕಿ ಜನರ ಡೆಬಿಟ್ ಕಾರ್ಡ್ ಹಾಗೂ ಕ್ರೆಡಿಟ್ ಕಾರ್ಡ್ ಮಾಹಿತಿಯನ್ನು ಕದ್ದು ಬಳಿಕ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕುತ್ತಿದ್ದರು ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ATMಎಟಿಎಂCIDಸಿಐಡಿಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಎಟಿಎಂ ಕಾರ್ಡ್Kempegowda International AirportATM card
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


