ರಾಜ್ಯ

ರಾಜ್ಯದಾದ್ಯಂತ ಭಾರಿ ಮಳೆ, ನೀರಲ್ಲಿ ಕೊಚ್ಚಿ ಹೋದ ತಾಯಿ ಮಗಳು

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಕೊಪ್ಪಳದಲ್ಲಿ ತಾಯಿ ಮಗಳು ನೀರಿನಲ್ಲಿ ಕೊಚ್ಚಿ ಹೋದ ಘಟನೆ ನಿನ್ನೆ ರಾತ್ರಿ ನಡೆದಿದೆ.

ರಾಜ್ಯದಾದ್ಯಂತ ಭಾರಿ ಮಳೆ, ನೀರಲ್ಲಿ ಕೊಚ್ಚಿ ಹೋದ ತಾಯಿ ಮಗಳು
ರಾಜ್ಯದಾದ್ಯಂತ ಭಾರಿ ಮಳೆ
Published On :
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಕೊಪ್ಪಳದಲ್ಲಿ ತಾಯಿ ಮಗಳು ನೀರಿನಲ್ಲಿ ಕೊಚ್ಚಿ ಹೋದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಕುಷ್ಠಗಿಯ ಬೊಮ್ಮನಾಳದಲ್ಲಿ ಹನುಮವ್ವ(50),ಪಾರವ್ವ ನೀರಿನಲ್ಲಿ ಕೊಚ್ಚಿ ಹೋಗಿದ್ದು ಭಾನುವಾರ ಬೆಳಗ್ಗೆ ಹನುಮವ್ವ ಶವ ಪತ್ತೆಯಾಗಿದೆ. ಪಾರವ್ವ ಶವಕ್ಕಾಗಿ ಶೋಧ ಕಾರ್ಯಾಚರಣೆ ನಡೆದಿದೆ.
ಬಂಗಾಳ ಕೊಲ್ಲಿಯಲ್ಲಿ  ತೀವ್ರ ವಾಯು ಭಾರ ಕುಸಿತ ಇದ್ದ ಕಾರಣ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಇನ್ನೆರಡು ದಿನ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. 
ಬೆಂಗಳೂರು ನಗರದಲ್ಲಿ ಭಾನುವಾರ ಬೆಳಗ್ಗೆ ಮಳೆ ಸುರಿಯುತ್ತಿದ್ದು ಹಲವು ರಸ್ತೆಗಳು ಜಲಾವೃತವಾಗಿ ಕೆರೆಗಳಂತಾಗಿವೆ. ತಗ್ಗು ಪ್ರದೇಶದ ಜನರಲ್ಲಿ ತೀವ್ರ ಆತಂಕ ಮನೆ ಮಾಡಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.