ಐಐಎಸ್ ಸಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ, ಸೆಕ್ಯೂರಿಟಿ ಗಾರ್ಡ್ ಬಂಧನ
ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ ಸಿ) ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಸಂಸ್ಥೆಯ ಭದ್ರತಾ ಸಿಬ್ಬಂದಿ ಗೌತಮ್ ರಾಜ್ ಎನ್ನುವವನನ್ನು ಸದಾಶಿವ ನಗರ ಪೊಲೀಸರು ಬಂಧಿಸಿದ್ದಾರೆ.

Published On :
ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ ಸಿ) ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಸಂಸ್ಥೆಯ ಭದ್ರತಾ ಸಿಬ್ಬಂದಿ ಗೌತಮ್ ರಾಜ್ ಎನ್ನುವವನನ್ನು ಸದಾಶಿವ ನಗರ ಪೊಲೀಸರು ಬಂಧಿಸಿದ್ದಾರೆ.
"ಸಂಸ್ಥೆಯಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ 22 ವರ್ಷದ ವಿದ್ಯಾರ್ಥಿನಿ ಸೆ.14ರಂದು ಗ್ರಂಥಾಲಯಕ್ಕೆ ಹೋಗಿದ್ದ ವೇಳೆ ಆರೋಪಿಯು ಈ ಕೃತ್ಯ ಎಸಗಿದ್ದಾನೆ. ಸದ್ಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದೇವೆ" ಎಂದು ಪೊಲೀಸರು ತಿಳಿಸಿದರು.
"ವಿದ್ಯಾರ್ಥಿನಿಯು ಮಧ್ಯಾಹ್ನ 12.20ರ ಸುಮಾರಿಗೆ ಗ್ರಂಥಾಲಯದಲ್ಲಿ ಓದುತ್ತಾ ಕುಳಿತಿದ್ದರು. ಅಲ್ಲಿಗೆ ಬಂದಿದ್ದ ಆರೋಪಿ ನಿಮ್ಮೊದನೆ ಮಾತನಾದಬೇಕು, ಹೊರಗೆ ಬನ್ನಿ ಎಂದು ಕರೆದಿದ್ದ. ಆಗ ಯುವತಿ ಆತನೊಂದಿಗೆ ಹೊರಗೆ ಬಂದಿದ್ದಾಳೆ. ಈ ವೇಳೆ ಯುವತಿಯ ಕೈ ಹಿಡಿದು ಎಳೆದಾಡಿದ್ದ ಆರೋಪಿ, ಮುತ್ತು ಕೊಡುವಂತೆ ಒತ್ತಾಯಿಸಿದ್ದ. ಗಾಬರಿಗೊಂಡ ಯುವತಿ ಆತನನ್ನು ತಳ್ಳಿ ತಪ್ಪಿಸಿಕೊಂಡಿದ್ದಳು. ನಂತರ ಹಾಸ್ಟೆಲ್ ಗೆ ಹೋಗಿ ಸಹಪಾಠಿಗಳಿಗೆ ವಿಷಯ ತಿಳಿಸಿದ್ದಳು" ಎಂದು ಪೊಲೀಸರು ವಿವರಿಸಿದರು.
ಘಟನೆಯ ಮಾಹಿತಿ ಪಡೆದುಕೊಂಡ ಯುವತಿಯ ಸೋದರ ಹಾಗೂ ಪೋಷಕರು ಠಾಣೆಗೆ ಬಂದು ದೂರು ನೀಡಿದ್ದರು. ಲೈಂಗಿಕ ದೌರ್ಜನ್ಯ (ಐಪಿಸಿ 354) ಆರೋಪದಡಿ ಪ್ರಕರಣ ದಾಕಲಿಸಿಕೊಂಡ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಐಐಎಸ್ ಸಿ ಯ ಲೈಂಗಿಕ ದೌರ್ಜನ್ಯ ತಡೆ ಸಮಿತಿ ಸದಸ್ಯರು ಪ್ರಕರಣ ಸಂಬಂಧ ವಿದ್ಯಾರ್ಥಿನಿಯ ಹೇಳಿಕೆ ಪಡೆದು ಪ್ರತ್ಯೇಕ ವಿಚಾರಣೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bangaloreಬೆಂಗಳೂರುಲೈಂಗಿಕ ಕಿರುಕುಳಭದ್ರತಾ ಸಿಬ್ಬಂದಿSecurity GuardIIScಐಐಎಸ್ ಸಿgraduate studentsexually harassementಪದವಿ ವಿದ್ಯಾರ್ಥಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


