ರಾಜ್ಯ

ಕಾರು ಅಪಘಾತ: ಮಾಜಿ ಎಂಪಿ ವಿಶ್ವನಾಥ್ ಪುತ್ರನಿಗೆ ಗಾಯ

ಮೈಸೂರು ಜಿಲ್ಲೆಯ ಕೆ.ಆರ್.ಪೇಟೆ ಹೊರವಲಯದಲ್ಲಿ ತಡರಾತ್ರಿ ಮಾಜಿ ಸಂಸದ ಎಚ್.ವಿಶ್ವನಾಥ್ ಅವರ ಪುತ್ರ ಪೂರ್ವಜ್ ವಿಶ್ವನಾಥ್ ರ ಕಾರು ಅಪಘಾತಕ್ಕೀದಾಗಿದೆ.

ಕಾರು ಅಪಘಾತ: ಮಾಜಿ ಎಂಪಿ ವಿಶ್ವನಾಥ್ ಪುತ್ರನಿಗೆ ಗಾಯ
ಕಾರ್ ಅಪಘಾತದಲ್ಲಿ ಮಾಜಿ ಎಂಪಿ ವಿಶ್ವನಾಥ್ ಪುತ್ರನಿಗೆ ಗಾಯ
Published On :
ಕೆ.ಆರ್.ಪೇಟೆ: ಮೈಸೂರು ಜಿಲ್ಲೆಯ ಕೆ.ಆರ್.ಪೇಟೆ ಹೊರವಲಯದಲ್ಲಿ ತಡರಾತ್ರಿ ಮಾಜಿ ಸಂಸದ ಎಚ್.ವಿಶ್ವನಾಥ್ ಅವರ ಪುತ್ರ ಪೂರ್ವಜ್ ವಿಶ್ವನಾಥ್ ರ ಕಾರು ಅಪಘಾತಕ್ಕೀದಾಗಿದೆದ್.
ಅದೃಷ್ಟವಶಾತ್ ಪೂರ್ವಜ್ ಅಪಾಯದಿಂದ ಪಾರಾಗಿದ್ದಾರೆ.  ಪೂರ್ವಜ್ ತನ್ನ ಕಾರಿನಲ್ಲಿ ಚಂದಗಾಲ ಗ್ರಾಮಕ್ಕೆ ಹೊರಟಿದ್ದ ವೇಳೆ ಅಲೂಗಡ್ಡೆ ತುಂಬಿದ ಗೂಡ್ಸ್ ಆಟೋ ಮುಖಾಮುಖಿಯಾಗಿ ಈ ಘಟನೆ ಸಂಭವಿಸಿದೆ. 
ಘಟನೆಯಲ್ಲಿ ಆಟೋದಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೂರ್ವಜ್ ಅವರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. 
ಅಪಘಾತದಲ್ಲಿ ಎರಡು ವಾಹನಗಳು ಸಂಪೂರ್ಣ ಜಖಂಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.  
ಕೆ.ಆರ್.ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.