ರಾಜ್ಯ

ರೈತರ ಹಿತಕಾಯಲು ಸರ್ಕಾರ ಬದ್ಧ, ಕಾವೇರಿ ನಿರ್ವಹಣಾ ಮಂಡಳಿಗೆ ನಮ್ಮ ವಿರೋಧ: ಸಿಎಂ ಸಿದ್ದರಾಮಯ್ಯ

ರಾಜ್ಯದ ರೈತರ ಹಿತಕಾಯಲು ಕರ್ನಾಟಕ ಸರ್ಕಾರ ಬದ್ಧವಾಗಿದ್ದು, ಈ ಹಿಂದಿನಂತೆಯೇ ಕಾವೇರಿ ನಿರ್ವಹಣಾ ಮಂಡಳಿಗೆ ನಮ್ಮ ವಿರೋಧ ಮುಂದುವರೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ರೈತರ ಹಿತಕಾಯಲು ಸರ್ಕಾರ ಬದ್ಧ, ಕಾವೇರಿ ನಿರ್ವಹಣಾ ಮಂಡಳಿಗೆ ನಮ್ಮ ವಿರೋಧ: ಸಿಎಂ ಸಿದ್ದರಾಮಯ್ಯ
ಮೈಸೂರಿನಲ್ಲಿ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
Published On :
ಮೈಸೂರು: ರಾಜ್ಯದ ರೈತರ ಹಿತಕಾಯಲು ಕರ್ನಾಟಕ ಸರ್ಕಾರ ಬದ್ಧವಾಗಿದ್ದು, ಈ ಹಿಂದಿನಂತೆಯೇ ಕಾವೇರಿ ನಿರ್ವಹಣಾ ಮಂಡಳಿಗೆ ನಮ್ಮ ವಿರೋಧ ಮುಂದುವರೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಭಾಷಣೆ ಮಾಡಿದ ಸಿಎಂ ಸಿದ್ದರಾಮಯ್ಯ ಅವರು, ಸುಪ್ರೀಂ ಕೋರ್ಟ್ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಯಾಗಬೇಕು ಎಂದು ಹೇಳಿದೆಯಾದರೂ, ಸುಪ್ರೀಂ  ಕೋರ್ಟ್ ಗೆ ಮಂಡಳಿ ರಚನೆಗೆ ಅಧಿಕಾರವಿಲ್ಲ. ಸಂಸತ್ತಿಗೆ ಮಾತ್ರ ಆ ಅಧಿಕಾರವಿದ್ದು, ಈ ಬಗ್ಗೆ ಈ ಹಿಂದೆ ಕೇಂದ್ರ ಸರ್ಕಾರದವೇ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದೆ ಎಂದು ಹೇಳಿದರು.

ಇದೇ ವೇಳೆ ಕಾವೇರಿ ನೀರು ನಿರ್ವಹಣಾ ಮಂಡಳಿ ರಾಜ್ಯದ ಪಾಲಿಗೆ ಕರಾಳ ಶಾಪವಾಗಲಿದ್ದು, ಇದೇ ಕಾರಣಕ್ಕೆ ನಾವು ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದೇವೆ. ಈ ಬಗ್ಗೆ ನಮ್ಮ ರಾಜ್ಯದ ವಕೀಲರನ್ನು  ನಾವು ಸಂಪರ್ಕಿಸಿದ್ದು, ನ್ಯಾಯಾಲಯಲ್ಲಿ ಸಮರ್ಥವಾಗಿ ವಾದ ಮಂಡಿಸುವಂತೆ ಸೂಚಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
ಬಳಿಕ ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಸ್ಥಳಕ್ಕೆ ತೆರಳಿದ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಂದ ಕಾಮಗಾರಿಗಳ ಮಾಹಿತಿ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.