ಹಿರಿಯ ವಿಚಾರವಾದಿ ಬಿವಿ ವೀರಭದ್ರಪ್ಪ ನಿಧನ!
ಹಿರಿಯ ವಿಚಾರವಾದಿ, ಖ್ಯಾತ ಚಿಂತಕ ಹಾಗೂ ಹಿರಿಯ ಪತ್ರಕರ್ತ ಬಿ.ವಿ.ವೀರಭದ್ರಪ್ಪ ಗುರುವಾರ ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ದಾವಣಗೆರೆ: ಹಿರಿಯ ವಿಚಾರವಾದಿ, ಖ್ಯಾತ ಚಿಂತಕ ಹಾಗೂ ಹಿರಿಯ ಪತ್ರಕರ್ತ ಬಿ.ವಿ.ವೀರಭದ್ರಪ್ಪ ಗುರುವಾರ ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.
ಕಳೆದ ಎರಡು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವೀರಭದ್ರಪ್ಪ ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ 3:30ರ ಸುಮಾರಿನಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಸಂಜೆ ವೇಳೆಗೆ ಪ್ರೊ.ಬಿ.ವಿ.ವೀರಭದ್ರಪ್ಪ ಅವರ ಆಶಯದಂತೆ ನಗರದ ಜೆಜೆಎಂ ವೈದ್ಯಕೀಯ ಕಾಲೇಜಿಗೆ ದೇಹದಾನ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮಾಧ್ಯಮವೊಂದು ವರದಿ ಮಾಡಿರುವಂತೆ ವೀರಭದ್ರಪ್ಪ ಅವರು ಲಂಕೇಶ್ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದ್ದರು. ಸುಮಾರ ಎರಡು ದಶಕಗಳ ಕಾಲ ಲಂಕೇಶ್ ಪತ್ರಿಕೆ ಪ್ರತಿನಿಧಿ ಹಾಗೂ 100ಕ್ಕೂ ಹೆಚ್ಚು ಕೃತಿಗಳನ್ನ ರಚಿಸಿದ್ದ ವೀರಭದ್ರಪ್ಪ ಪತ್ರಿಕೋದ್ಯಮದಲ್ಲಿ ಗಮನ ಸೆಳೆದಿದ್ದರು. ಪ್ರೊ.ಬಿ.ವಿ.ವೀರಭದ್ರಪ್ಪ ಅವರ 'ವೇದಾಂತ ರೆಜಿಮೆಂಟ್' ಕೃತಿಯನ್ನು ಪಿ.ಲಂಕೇಶ್ ತಮ್ಮ ಪತ್ರಿಕೆ ಪ್ರಕಾಶನದಿಂದ ಪ್ರಕಟಿಸಿದ್ದರು. ಮೌಢ್ಯ, ಶೋಷಣೆ, ಬೌದ್ಧಿಕ ಗುಲಾಮಗಿರಿಯನ್ನು ವೈಚಾರಿಕ ನಿಲುವಿನಿಂದ ಬಿವಿ ವೀರಭದ್ರಪ್ಪ ವಿಶ್ಲೇಷಿಸುತ್ತಿದ್ದರು. ಅಲ್ಲದೆ ಪುರೋಹಿತಶಾಹಿ ದಬ್ಬಾಳಿಕೆ ಇಲ್ಲಿ 'ವೇದಾಂತ ರೆಜಿಮೆಂಟ್' ಆಗಿದೆ" ಎಂದು ಹೇಳಿ ಚರ್ಚೆಗೀಡಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


