ಬಾಂಬ್ ನಾಗ ಮತ್ತು ಪುತ್ರರಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು!
ಹವಾಲಾ ದಂಧೆ ಹಾಗೂ ದರೋಡೆ ಪ್ರಕರಣಗಳಲ್ಲಿ ಭಾಗಿಯಾದ ಆರೋಪದ ಮೇಲೆ ಬಂಧನಕ್ಕೀಡಾಗಿದ್ದ ಮಾಜಿ ಕಾರ್ಪೋರೇಟರ್ ಹಾಗೂ ರೌಡಿ ಶೀಟರ್ ನಾಗರಾಜು (ಬಾಂಬ್ ನಾಗ) ಮತ್ತು ಅವರ ಇಬ್ಬರು ಪುತ್ರರಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Published On :
ಬೆಂಗಳೂರು: ಹವಾಲಾ ದಂಧೆ ಹಾಗೂ ದರೋಡೆ ಪ್ರಕರಣಗಳಲ್ಲಿ ಭಾಗಿಯಾದ ಆರೋಪದ ಮೇಲೆ ಬಂಧನಕ್ಕೀಡಾಗಿದ್ದ ಮಾಜಿ ಕಾರ್ಪೋರೇಟರ್ ಹಾಗೂ ರೌಡಿ ಶೀಟರ್ ನಾಗರಾಜು (ಬಾಂಬ್ ನಾಗ) ಮತ್ತು ಅವರ ಇಬ್ಬರು ಪುತ್ರರಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜೀವ ಬೆದರಿಕೆ, ಅಪಹರಣ, ಅಕ್ರಮ ಹಣ ಸಾಗಣೆ, ಹವಾಲಾ ದಂಧೆ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಬಾಂಬ್ ನಾಗನ ವಿರುದ್ಧ ದೂರು ದಾಖಲಾಗಿತ್ತು. ಇದೇ ಕಾರಣಕ್ಕೆ ಶ್ರೀರಾಂಪುರದಲ್ಲಿರುವ ಬಾಂಬ್ ನಾಗನ ಕಚೇರಿ ಹಾಗೂ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿ ಅಪಾರ ಪ್ರಮಾಣದ ಬ್ಯಾನ್ ಆಗಿದ್ದ ನೋಟುಗಳನ್ನು ವಶಕ್ಕೆ ಪಡೆದಿದ್ದರು. ಬಳಿಕ ತಲೆಮರೆಸಿಕೊಂಡಿದ್ದ ನಾಗನನ್ನು ಪೊಲೀಸರು ಬಂಧಿಸಿದ್ದರು.
ಇದೀಗ ಎರಡು ಲಕ್ಷ ರೂ. ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಮತ್ತು ಪ್ರತೀ ಗುರುವಾರ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು ಎಂಬ ಷರತ್ತಿನೊಂದಿಗೆ ಹೈ ಕೋರ್ಟ್ ಏಕಸದಸ್ಯ ಪೀಠ ನಾಗ ಮತ್ತು ಆತನ ಇಬ್ಬರು ಪುತ್ರರಾದ ಶಾಸ್ತ್ರೀ ಮತ್ತು ಗಾಂಧಿಗೆ ಜಾಮೀನು ಮಂಜೂರು ಮಾಡಿದೆ.
ಮೂವರು ಉದ್ಯಮಿಗಳಿಗೆ ವಂಚಿಸಿದ ಆರೋಪ ಸೇರಿದಂತೆ ಇನ್ನಿತರ ಪ್ರಕರಣಗಳಿಗೆ ಸಂಬಂಧಿಸಿ ನಾಗರಾಜು, ಆತನ ಮಕ್ಕಳಾದ ಗಾಂಧೀ,ಶಾಸ್ತ್ರೀ, ಸಹಚರರಾದ ಜಯ ಕೃಷ್ಣ, ಸರವಣ್, ಸೌಂದರ್ಯರಾಜ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.