ಈಶ್ವರಪ್ಪ ಪಿ.ಎ ಕಿಡ್ನಾಪ್ ಪ್ರಕರಣ: ಯಡಿಯೂರಪ್ಪಗೆ ಪೊಲೀಸ್ ಸಮನ್ಸ್
ಡಿನೋಟಿಫಿಕೇಷನ್ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ವಿರುದ್ಧ ತನಿಖೆ ನಡೆಸದಂತೆ ಹೈಕೋರ್ಟ್ ತಡೆ ನೀಡಿದ ಬೆನ್ನಲ್ಲೆ ಬಿಎಸ್ ವೈ ಗೆ ...

Published On :
ಬೆಂಗಳೂರು: ಡಿನೋಟಿಫಿಕೇಷನ್ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ವಿರುದ್ಧ ತನಿಖೆ ನಡೆಸದಂತೆ ಹೈಕೋರ್ಟ್ ತಡೆ ನೀಡಿದ ಬೆನ್ನಲ್ಲೆ ಬಿಎಸ್ ವೈ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್ ಈಶ್ವರಪ್ಪ ಅವರ ಆಪ್ತ ಸಹಾಯಕನ ಕಿಡ್ನಾಪ್ ಪ್ರಕರಣ ಸಂಬಂಧ ಯಿಡಯೂರಪ್ಪ ಅವರಿಗೆ ಸಮನ್ಸ್ ನೀಡಲಾಗಿದೆ.
ಕೆ.ಎಸ್.ಈಶ್ವರಪ್ಪ ಅವರ ಆಪ್ತ ಸಹಾಯಕ (ಪಿ.ಎ) ವಿನಯ್ ಅವರ ಅಪಹರಣಕ್ಕೆ ಯತ್ನ ಹಾಗೂ ಹಲ್ಲೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪೊಲೀಸರು ಶುಕ್ರವಾರ ನೋಟಿಸ್ ನೀಡಿದ್ದಾರೆ.
ಡಾಲರ್ಸ್ ಕಾಲೊನಿಯಲ್ಲಿರುವ ಯಡಿಯೂರಪ್ಪ ಅವರ ಮನೆಗೆ ಹೋಗಿದ್ದ ಮಲ್ಲೇಶ್ವರ ಉಪವಿಭಾಗದ ಪೊಲೀಸರು, ಖುದ್ದಾಗಿ ಅವರ ಕೈಗೆ ನೋಟಿಸ್ ಪ್ರತಿ ಕೊಟ್ಟಿದ್ದಾರೆ. ಅದರ ಸ್ವೀಕೃತಿಗೆ ಯಡಿಯೂರಪ್ಪ ಅವರು ಸಹಿ ಮಾಡಿದ್ದಾರೆ.
ಸೆಪ್ಟೆಂಬರ್ 28ರಂದು ಬೆಳಿಗ್ಗೆ 10.30 ಗಂಟೆಗೆ ಮಹಾಲಕ್ಷ್ಮಿಪುರದ 2ನೇ ಮುಖ್ಯರಸ್ತೆಯಲ್ಲಿರುವ ನನ್ನ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಬೇಕು ಮತ್ತು ತನಿಖೆಗೆ ಸಹಕರಿಸಬೇಕು ಎಂದು ಎಸಿಪಿ ಬಡಿಗೇರ್ ಅವರು ನೋಟಿಸ್‌ನಲ್ಲಿ ತಿಳಿಸಿದ್ದಾರೆ.
ಯಡಿಯೂರಪ್ಪ ಅವರ ಆಪ್ತ ಸಹಾಯಕ ಎನ್.ಆರ್. ಸಂತೋಷ್ ಸಹ ಆರೋಪಿಯಾಗಿದ್ದು, ಸದ್ಯ ಸ್ಥಳೀಯ ನ್ಯಾಯಾಲಯವು ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ.
ಇನ್ನೂ ಡಿನೋಟಿಫಿಕೇಷನ್ ಪ್ರಕರಣದಲ್ಲಿ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿರುವುದಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ಇದೊಂದು ರಾಜಕೀಯ ಪಿತೂರಿ, ದುರುದ್ದೇಶದಿಂದ ನನ್ನ ವಿರುದ್ಧ ದೂರು ದಾಖಲಿಸಲಾಗಿದೆ, ಸಿದ್ದರಾಮಯ್ಯ ಮತ್ತು ಕೆಂಪಯ್ಯ ಸೇರಿದಂತೆ ಹಲವು ಅಧಿಕಾರಿಗಳು ಪ್ರಕರಣದಲ್ಲಿ ನನ್ನನ್ನು ಸಿಕ್ಕಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


