ರಾಜ್ಯ

ಬೆಳಗಾವಿಯಲ್ಲಿ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ಆರೋಪಿ ಬಂಧನ

ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ನಂತರ ಆಕೆಯನ್ನು ಹತ್ಯೆ ಮಾಡಿ ಹೂತು ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.....

ಬೆಳಗಾವಿಯಲ್ಲಿ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ಆರೋಪಿ ಬಂಧನ
ಬಂಧಿತ ಅತ್ಯಾಚಾರ ಆರೋಪಿ ಉದ್ದಪ್ಪ ರಾಮಪ್ಪ ಗಾಣಿಗೇರ್
Published On :
ಬೆಳಗಾವಿ: ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ನಂತರ ಆಕೆಯನ್ನು ಹತ್ಯೆ ಮಾಡಿ ಹೂತು ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆ ಕುರುಬಗೊಡ್ಡಿ ಗ್ರಾಮದ ಉದ್ದಪ್ಪ ರಾಮಪ್ಪ  ಗಾಣಿಗೇರ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.ಚಾಕೊಲೇಟ್‌ ಕೊಡಿಸುವ ನೆಪದಲ್ಲಿ ಬಾಲಕಿಯನ್ನು ಕರೆದೊಯ್ದು ಆರೋಪಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಣಿಗೇರ್ ಬಾಲಕಿಯ ಸಂಬಂಧಿಯಾಗಿದ್ದು, ಆತ ಬಾಲಕಿಯನ್ನು ಕರೆದೊಯ್ಯುವಾಗ ಅಕ್ಕಪಕ್ಕದ ಮನೆಯವರು ಗಮನಿಸಿದ್ದಾರೆ, ಆದರೆ ಆತ ಸಂಬಂಧಿಯಾದ್ದರಿಂದ ಯಾರೊಬ್ಬರು ಆತನ ಮೇಲೆ ಅನುಮಾನ ವ್ಯಕ್ತ ಪಡಿಸಲಿಲ್ಲ. 
ತಡರಾತ್ರಿಯಾದರೂ ಬಾಲಕಿ ಮನೆಗೆ ಬಾರದಿದ್ದಾಗ, ಪೋಷಕರು ಹುಡುಕಾಟ ನಡೆಸಿದ್ದಾರೆ. ಬಾಲಕಿಯನ್ನು ಉದ್ದಪ್ಪ ಎತ್ತಿಕೊಂಡು ಹೋಗುತ್ತಿದ್ದುದನ್ನು ನೋಡಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ನಂತರ ಉದ್ದಪ್ಪನ ಮನೆಗೆ ಹೋಗಿ ಪೋಷಕರು, ಮಗು ಎಲ್ಲಿ ಎಂದು ವಿಚಾರಿಸಿ, ಥಳಿಸಿದ್ದಾರೆ. ಬಳಿಕ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಅತ ಕೊಲೆ ಮಾಡಿರುವುದಾಗಿ ಹೇಳಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯ ಮೃತದೇಹ ಅರ್ಧಂಬರ್ಧ ಹೂತ ಸ್ಥಿತಿಯಲ್ಲಿ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದೆ. ಉದ್ದಪ್ಪನನ್ನು ಬಂಧಿಸಿದ ಪೊಲೀಸರು ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನೂ ಬೆಳಗಾವಿ ಜಿಲ್ಲಾಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ ಬಾಲಕಿಯ ಕುಟುಂಬಸ್ಥರು ಹಾಗೂ ಪ್ರತಿಭಟನಾಕಾರರು ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಆಗ್ರಹಿಸಿದರು. ಸ್ಥಳಕ್ಕಾಗಮಿಸಿದ ಡಿಸಿಪಿ ಅಮರನಾಥ್ ರೆಡ್ಡಿ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.