ರಾಜ್ಯ

ದಸರಾ ಹಬ್ಬಕ್ಕೆ ಮೂರು ದಿನಗಳಿಗೆ ಬಳ್ಳಾರಿಗೆ ತೆರಳಲು ರೆಡ್ಡಿಗೆ ಅನುಮತಿ

ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿ ನಂತರ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ...

ದಸರಾ ಹಬ್ಬಕ್ಕೆ ಮೂರು ದಿನಗಳಿಗೆ ಬಳ್ಳಾರಿಗೆ ತೆರಳಲು ರೆಡ್ಡಿಗೆ ಅನುಮತಿ
ಜನಾರ್ದನ ರೆಡ್ಡಿ(ಸಂಗ್ರಹ ಚಿತ್ರ)
Published On :
ನವದೆಹಲಿ: ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿ ನಂತರ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಅವರಿಗೆ ದಸರಾ ಆಚರಣೆಗಾಗಿ ಮೂರು ದಿನ ಬಳ್ಳಾರಿಗೆ ತೆರಳಲು ಸುಪ್ರೀಂ ಕೋರ್ಟ್‌ ಅನುಮತಿ ನೀಡಿದೆ.
ದಸರಾ ಆಚರಣೆ ಅಂಗವಾಗಿ ತಮ್ಮ ಕುಟುಂಬದವರ ಜೊತೆ ಸಾಂಪ್ರದಾಯಿಕ ವಿಧಿ ವಿಧಾನಗಳಲ್ಲಿ ಭಾಗವಹಿಸಲು ಸೆಪ್ಟೆಂಬರ್‌ 29 ರಿಂದ ಅಕ್ಟೋಬರ್ 1ರವರೆಗೆ ರೆಡ್ಡಿ ಅವರಿಗೆ ಬಳ್ಳಾರಿಗೆ ತೆರಳಲು ನ್ಯಾಯಮೂರ್ತಿಗಳಾದ ಎ.ಕೆ. ಸಿಕ್ರಿ ಹಾಗೂ ಅಶೋಕ್‌ ಭೂಷಣ್‌ ಅವರ ಪೀಠ ಅನುಮತಿ ನೀಡಿತು. ಬಳ್ಳಾರಿಗೆ ಹೋಗಲು ಅನುಮತಿ ಕೋರಿ ಜನಾರ್ದನ ರೆಡ್ಡಿಯವರು ಈ ಹಿಂದೆ ಹಲವು ಬಾರಿ ಮನವಿ ಮಾಡಿಕೊಂಡಿದ್ದರು.
ಅಕ್ರಮ ಗಣಿಗಾರಿಕೆ ಕೇಸು ಮತ್ತು ಒಬುಳಾಪುರಂ ಗಣಿ ಕಂಪೆನಿಯ ಅಕ್ರಮ ವ್ಯವಹಾರಕ್ಕೆ ಸಂಬಂಧಪಟ್ಟಂತೆ 2011ರ ಸೆಪ್ಟೆಂಬರ್‌ 5ರಂದು ಸಿಬಿಐನಿಂದ ಬಂಧನಕ್ಕೆ ಒಳಗಾಗಿದ್ದ ಜನಾರ್ದನ ರೆಡ್ಡಿ ಅವರಿಗೆ, ಬಳ್ಳಾರಿ, ಅನಂತಪುರ ಮತ್ತು ಕಡಪಗಳಿಗೆ ತೆರಳದಂತೆ ಷರತ್ತು ವಿಧಿಸಿ 2015ರ ಜನವರಿ 21ರಂದು ಜಾಮೀನು ನೀಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.