ಕರ್ನಾಟಕ ಮೌಢ್ಯ ಪ್ರತಿಬಂಧಕ ಕಾಯ್ದೆಗೆ ಕ್ಯಾಬಿನೆಟ್ ಅನುಮೋದನೆ
ಕರ್ನಾಟಕ ಸರ್ಕಾರದ ಬಹು ಚರ್ಚಿತ 'ಮೌಢ್ಯ ಪ್ರತಿಬಂಧಕ ಕಾಯ್ದೆ' ಈಗ ಪುನಃ ಸದ್ದು ಮಾಡುತ್ತಿದೆ.

Published On :
ಬೆಂಗಳೂರು: ಕರ್ನಾಟಕ ಸರ್ಕಾರದ ಬಹು ಚರ್ಚಿತ 'ಮೌಢ್ಯ ಪ್ರತಿಬಂಧಕ ಕಾಯ್ದೆ' ಈಗ ಪುನಃ ಸದ್ದು ಮಾಡುತ್ತಿದೆ. ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಸೂದ ಮಂಡನೆಗೆ ಒಪ್ಪಿಗೆ ಸಿಕ್ಕಿದೆ. ಮುಂದಿನ ಬೆಳಗಾವಿ ಅಧಿವೇಶನದಲ್ಲಿ ಈ ಕುರಿತ ಮಸೂದೆ ಮಂಡನೆ ಮಾಡಲಾಗುತ್ತದೆ.
ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ ಈ ಕುರಿತಂತೆ ಮಾಹಿತಿ ನೀಡಿದ್ದಾರೆ.
ಕಾಯ್ದೆ ಜಾರಿಯಾದ ಬಳಿಕ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಚರಣೆಯಲ್ಲಿರುವ ಮಡೆ ಸ್ನಾನ, ಉತ್ತರ ಮಧ್ಯ ಕರ್ನಾಟಕ ಭಾಗಗಳಲ್ಲಿ ನಡೆಯುವ ಸಿಡಿ ಸೇವೆ, ಬೆತ್ತಲೆ ಸೇವೆಗಳು ನಿಷೇಧಕ್ಕೆ ಒಳಗಾಗುತ್ತವೆ. ಆದರೆ ಜ್ಯೋತಿಷ್ಯ, ವಾಸ್ತುವಿಗೆ ಈ ಕಾಯ್ದೆಯಿಂದ ಯಾವ ಅಡ್ಡಿಯುಂಟಾಗುವುದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahರಾಜ್ಯ ಸಚಿವ ಸಂಪುಟState cabinetKarnataka anti-superstition Billassembly session in Belagaviಕರ್ನಾಟಕ ಮೌಢ್ಯ ಪ್ರತಿಬಂಧಕ ಕಾಯ್ದೆಬೆಳಗಾವಿ ವಿಧಾನಸಭಾ ಅಧಿವೇಶನಸಿಎಂ ಸಿದ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


