ಮೋಡ ಬಿತ್ತನೆ ಕಾರ್ಯ ಯಶಸ್ವಿಯಾಗಿದೆ: ಎಚ್.ಕೆ ಪಾಟೀಲ್
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಮ್ಮಿಕೊಂಡಿದ್ದ ಮೋಡ ಬಿತ್ತನೆ ಕಾರ್ಯಕ್ರಮ ಯಶಸ್ವಿಯಾಗಿದ್ದು ಬಿತ್ತನೆ ಮಾಡಿದ್ದ ಸ್ಥಳದಲ್ಲಿ ಶೇ.10-25 ರಷ್ಟು ...

Published On :
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಮ್ಮಿಕೊಂಡಿದ್ದ ಮೋಡ ಬಿತ್ತನೆ ಕಾರ್ಯಕ್ರಮ ಯಶಸ್ವಿಯಾಗಿದ್ದು ಬಿತ್ತನೆ ಮಾಡಿದ್ದ ಸ್ಥಳದಲ್ಲಿ ಶೇ.10-25 ರಷ್ಟು ಮಳೆಯಾಗಿದೆ ಎಂದು ಸಚಿವ ಎಚ್.ಕೆ ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 37 ದಿನಗಳಲ್ಲಿ ಸುಮಾರು 90 ಗಂಟೆ ಮಾಡಿದ ಮೋಡ ಬಿತ್ತನೆಯಿಂದಾಗಿ ವೈಜ್ಞಾನಿಕ ಸಾಧನೆಯಿಂದಾಗಿ ರಾಜ್ಯಾದ್ಯಂತ ಮಳೆಯಾಗಿದೆ ಎಂದು ತಿಳಿಸಿದ್ದಾರೆ. ಇದು ವಿಜ್ಞಾನದ ಗೆಲುವಾಗಿದೆ.
ಮೋಡ ಬಿತ್ತನೆಯಿಂದ ಕೇವಲ ಮಳೆಯ ಪ್ರಮಾಣದಲ್ಲಿ ಹೆಚ್ಚಳವಾಗಿರುವುದು ಮಾತ್ರವಲ್ಲ, ಮಣ್ಣಿನ ತೇವಾಂಶ ಕೂಡ ಗಣನೀಯವಾಗಿ ಏರಿಕೆಯಾಗಿದೆ.
ಹುಬ್ಬಳ್ಳಿ ಮತ್ತು ಬೆಂಗಳೂರಿನಲ್ಲಿ ಎರಡು ವಿಮಾನಗಳಲ್ಲಿ 587 ಸ್ಫೋಟ ನಡೆಸಿದ ಪರಿಣಾಮ, ಚನ್ನಪಟ್ಟಣ, ಮಾಗಡಿ, ಚನ್ನರಾಯಪಟ್ಟಣ, ಅರಸೀಕೆರೆ ಕಡೂರು ಸೇರಿದಂತೆ ವಿವಿಧ ಪ್ರದೇಶಗಳಿಗೆ ಮೋಡ ಚದುರಿ ಹೋಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


