ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ಕನ್ನಡದಲ್ಲಿ ಮಾತನಾಡಿದ್ದಕ್ಕೆ ವ್ಯಕ್ತಿಗೆ ಕಿರುಕುಳ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಾವು ಕನ್ನಡದಲ್ಲಿ ಮಾತನಾಡಿದ್ದೇನೆ ಎಂಬ ಕಾರಣಕ್ಕೆ ಗೊಏರ್ ವಿಮಾನದ ...

Published On :
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡದಲ್ಲಿ ಮಾತನಾಡಿದ್ದೇನೆ ಎಂಬ ಕಾರಣಕ್ಕೆ ಗೊಏರ್ ವಿಮಾನದ ಒಳಹೋಗಲು ಪ್ರವೇಶ ನಿರಾಕರಸಿ ಅಲ್ಲಿನ ಸಿಬ್ಬಂದಿ ತಮ್ಮನ್ನು ಕೀಳಾಗಿ ನಡೆಸಿಕೊಂಡರು ಎಂದರು ಪ್ರಯಾಣಿಕರೊಬ್ಬರು ನೀಡಿದ ದೂರಿಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಬಳಿ ವರದಿ ಕೇಳಿದೆ. ಅಲ್ಲದೆ ಸರ್ಕಾರದಿಂದ ಕೂಡ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವಿವರ ಕೇಳಿದೆ.
ಬೆಂಗಳೂರು ಮೂಲದ ಉದ್ಯಮಿ ಬಾಲಾಜಿ ನಾರಾಯಣ್ ಮೂರ್ತಿ ಮೊನ್ನೆ ಸಾಯಂಕಾಲ 5.40ರ ಸುಮಾರಿಗೆ ಮುಂಬೈಗೆ ವಿಮಾನದಲ್ಲಿ ತೆರಳಲು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಮಳೆಯಿಂದಾಗಿ ಬರುವುದು ತಡವಾಗಿತ್ತು. ಇನ್ನೂ ಕೆಲ ಪ್ರಯಾಣಿಕರು ಕೂಡ ಬರುವುದು ತಡವಾಗಿತ್ತು. ಬೇರೆ ವಿಮಾನದಲ್ಲಿ ತೆರಳಲು ವ್ಯವಸ್ಥೆ ಮಾಡಲಾಗುವುದು ಎಂದು ವ್ಯವಸ್ಥಾಪಕರು ತಿಳಿಸಿದ್ದರು. ಆಗ ಬಾಲಾಜಿ ಮೂರ್ತಿ ಸಹ ಪ್ರಯಾಣಿಕರೊಬ್ಬರಲ್ಲಿ ಕನ್ನಡದಲ್ಲಿ ಮಾತನಾಡಲು ಆರಂಭಿಸಿದಾಗ ಗೊಏರ್ ಸಿಬ್ಬಂದಿ ಇಂಗ್ಲಿಷ್ ನಲ್ಲಿ ಮಾತನಾಡುವಂತೆ ಹೇಳಿದರು.
ನಂತರ ಬದಲಿ ವಿಮಾನ ಬಂದಾಗ ಮೂರ್ತಿಯವರಿಗೆ ವಿಮಾನವೇರಲು ಸಿಬ್ಬಂದಿ ಬಿಡಲಿಲ್ಲ. ಅದಕ್ಕೆ ತಾನು ಗೊಏರ್ ಸಂಸ್ಥೆಗೆ ಮೇಲ್ ಕಳುಹಿಸಿದರೆ ಗೊಏರ್ ದೂರು ಸ್ವೀಕರಿಸಲು ನಿರಾಕರಿಸಿದೆ. ನಂತರ ಸಿಸಿಟಿವಿ ಕ್ಯಾಮರಾ ತಪಾಸಣೆ ಮಾಡಿದಾಗ ಸಿಬ್ಬಂದಿ ಮೂರ್ತಿಯವರ ಜೊತೆ ಅನುಚಿತವಾಗಿ ವರ್ತಿಸಿರುವುದು ಗೊತ್ತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
kannadaಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕನ್ನಡpassengerGoAirKempegowda International Airportಪ್ರಯಾಣಿಕಗೊಏರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


