ಮಡಿಕೇರಿ: ಚೇಲಾವರ ಜಲಪಾತದಲ್ಲಿ ಮುಳುಗಿ ಬೆಂಗಳೂರು ಮೂಲದ ವಿದ್ಯಾರ್ಥಿ ಸಾವು!
ಪ್ರವಾಸಿ ತಾಣ ಮಡಿಕೇರಿಯ ಚೇಲಾವರ ಜಲಪಾತದ ನೀರಿನಲ್ಲಿ ಮುಳುಗಿ ಬೆಂಗಳೂರು ಮೂಲದ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ಮಡಿಕೇರಿ: ಪ್ರವಾಸಿ ತಾಣ ಮಡಿಕೇರಿಯ ಚೇಲಾವರ ಜಲಪಾತದ ನೀರಿನಲ್ಲಿ ಮುಳುಗಿ ಬೆಂಗಳೂರು ಮೂಲದ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.
ಸ್ನೇಹಿತರೊಂದಿಗೆ ಚೇಲಾವರ ಜಲಪಾತ ವೀಕ್ಷಣೆಗೆ ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ದರ್ಶನ್ (22 ವರ್ಷ) ಎಂಬಾತ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ನೀರಿನಲ್ಲಿ ಮುಳುಗಿದ ದರ್ಶನ್ ಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ. ಇನ್ನು ಮೂಲತಃ ದರ್ಶನ್ ಕೊಡಗಿನವರಾಗಿದ್ದು, ಇವರ ತಂದೆ ಕಾವೇರಪ್ಪ ಬೆಂಗಳೂರಿನ ಜೆಪಿ ನಗರದ ನಿವಾಸಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ದರ್ಶನ್ ಸ್ನೇಹಿತರು ಹೇಳಿರುವಂತೆ ದಸರಾ ವೀಕ್ಷಣೆಗೆಂದು ತನ್ನ ಇತರ ನಾಲ್ವರು ಸ್ನೇಹಿತರೊಂದಿಗೆ ದರ್ಶನ್ ಶನಿವಾರ ಮಡಿಕೇರಿ ನಗರಕ್ಕೆ ತೆರಳಿದ್ದರಂತೆ. ಭಾನುವಾರ ಬೆಳಗ್ಗೆ ಚೇಲಾವರ ಜಲಪಾತಕ್ಕೆ ತೆರಳಿ ಸ್ನಾನಕ್ಕೆಂದು ನೀರಿಗಿಳಿದಿದ್ದು, ಈ ವೇಳೆ ನೀರಿನ ರಭಸ ಹೆಚ್ಚಾಗಿ ದರ್ಶನ್ ನೀರು ಪಾಲಾಗಿದ್ದಾರೆ ಎನ್ನಲಾಗಿದೆ. ಪ್ರಸ್ತುತ ಈ ಸಂಬಂಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಬ್ಬಂದಿಗಳು ಶೋಧ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


