ರಾಜ್ಯ

ಕುತೂಹಲ ಕೆರಳಿಸಿದ ನಟ ಕಿಚ್ಚಾ ಸುದೀಪ್, ಎಚ್ ಡಿಕೆ ಭೇಟಿ!

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ನಟ ಕಿಚ್ಚಾ ಸುದೀಪ್ ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಕುತೂಹಲ ಕೆರಳಿಸಿದ ನಟ ಕಿಚ್ಚಾ ಸುದೀಪ್, ಎಚ್ ಡಿಕೆ ಭೇಟಿ!
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೋಟೋ
Published On :
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ನಟ ಕಿಚ್ಚಾ ಸುದೀಪ್ ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಮೂಲಗಳ ಪ್ರಕಾರ ಕುಮಾರಸ್ವಾಮಿ ಅವರ ಬೆಂಗಳೂರಿನ ಜೆಪಿ ನಗರ ನಿವಾಸಕ್ಕೆ ನಟ ಸುದೀಪ್ ಅವರು ಆಗಮಿಸಿದ್ದು, ಸುಮಾರು 2 ಗಂಟೆಗೂ ಅಧಿಕ ಸಮಯ ಚರ್ಚೆ ನಡೆಸಿದ್ದಾರೆ. ಸುದೀಪ್ ಭೇಟಿ ವೇಳೆ ಕುಮಾರಸ್ವಾಮಿ ಅವರ ಪುತ್ರ ನಿಖಿಲ್, ಪತ್ನಿ ಅನಿತಾ ಕುಮಾರಸ್ವಾಮಿ ಅವರೂ ಕೂಡ ಇದ್ದರು. ಕುಮಾರಸ್ವಾಮಿ ನಿವಾಸದಲ್ಲೇ ಸುದೀಪ್ ಬೆಳಗಿನ ಉಪಾಹಾರ ಕೂಡ ಸವಿದಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ನಟ ಸುದೀಪ್ ಗೌಡರ ಕುಟುಂಬದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.
ಇನ್ನು ಸುದೀಪ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆಯೇ ಅಥವಾ ಪಕ್ಷಕ್ಕೆ ಸೇರ್ಪಡೆಯಾಗದೇ ಪಕ್ಷದ ಸ್ಟಾರ್ ಪ್ರಚಾರಕರಾಗಿ ಜೆಡಿಎಸ್ ಪರ ಪ್ರಚಾರ ಕಾರ್ಯ ನಡೆಸಲಿದ್ದಾರೆ ಎಂಬ ಅಂಶಗಳ ಕುರಿತು ಇದೀಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.