ರಾಜ್ಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರವಾಸಿಗರಿಗೆ ರಾಜ್ಯದ ಕುರಿತು ಮಾಹಿತಿ ನೀಡಲಿದೆ 'ಕೆಂಪ' ರೋಬೋಟ್

ವಿದೇಶ ಹಾಗೂ ಹೊರರಾಜ್ಯಗಳಿಂದ ಕರ್ನಾಟಕ ರಾಜ್ಯದ ಪ್ರವಾಸಕ್ಕೆ ಬರುವ ಪ್ರವಾಸಿಗರಿಗೆ ಕೆಂಪೇಗೌಡ ಅಂತಾರಾಷ್ಟ್ರೀ ವಿಮಾನ ನಿಲ್ದಾಣದಲ್ಲಿ ಕೆಂಪ ಹೆಸರಿನ ರೋಬೋಟ್ ಎಲ್ಲ ಮಾಹಿತಿ ಒದಗಿಸಲಿದ್ದಾನೆ...

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರವಾಸಿಗರಿಗೆ ರಾಜ್ಯದ ಕುರಿತು ಮಾಹಿತಿ ನೀಡಲಿದೆ 'ಕೆಂಪ' ರೋಬೋಟ್
ರೋಬೋಟ್
Published On :
ಬೆಂಗಳೂರು: ವಿದೇಶ ಹಾಗೂ ಹೊರರಾಜ್ಯಗಳಿಂದ ಕರ್ನಾಟಕ ರಾಜ್ಯದ ಪ್ರವಾಸಕ್ಕೆ ಬರುವ ಪ್ರವಾಸಿಗರಿಗೆ ಕೆಂಪೇಗೌಡ ಅಂತಾರಾಷ್ಟ್ರೀ ವಿಮಾನ ನಿಲ್ದಾಣದಲ್ಲಿ ಕೆಂಪ ಹೆಸರಿನ ರೋಬೋಟ್ ಎಲ್ಲ ಮಾಹಿತಿ ಒದಗಿಸಲಿದ್ದಾನೆ. 
ಪ್ರಯಾಣಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಕೆಂಪ ರೋಬೋಟ್ ರಾಜ್ಯದ ಕುರಿತಂತೆ ಮಾಹಿತಿ ನೀಡುವ ಕೆಲಸ ನಿರ್ವಹಿಸಲಿದೆ. ಬೆಂಗಳೂರಿನ ಮೊದಲ ಸ್ಟಾರ್ಟ್ ಆಪ್ ಕಂಪನಿಯೊಂದು ಈ ರೋಬೋಟ್ ಅನ್ನು ಅಭಿವೃದ್ಧಿಪಡಿಸಿದೆ. 
ವಿಮಾನ ನಿಲ್ದಾಣದಲ್ಲಿ ಕೆಂಪ ರೋಬೋಟ್ ಕರ್ನಾಟಕದ ಪ್ರಮುಖ ಪ್ರವಾಸಿ ತಾಣಗಳು, ಪಾರಂಪರಿಕ ಸ್ಥಳ ಹಾಗೂ ಸಂಸ್ಕೃತಿ ಬಗ್ಗೆ ತಿಳಿಸಲಿದೆ. ಈ ಮೂಲಕ ಮೊದಲ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡುವ ವಿದೇಶಿಗರು ಹಾಗೂ ಇತರ ರಾಜ್ಯದ ಪ್ರವಾಸಿಗರು ಕೆಂಪನಿಂದ ಮಾಹಿತಿ ಪಡೆಯಬಹುದಾಗಿದೆ. ಈ ಕೆಂಪ ಇಂಗ್ಲಿಷ್ ಮತ್ತು ಕನ್ನಡ ಎರಡು ಭಾಷೆಯಲ್ಲೂ ಮಾಹಿತಿ ನೀಡಲಿದೆ. 
ಕೆಂಪ ರೋಬೋಟ್ ಮಾಹಿತಿ ನೀಡುವುದರ ಜತೆಗೆ ವಿಮಾನ ನಿಲ್ದಾಣದಲ್ಲಿ ಲೋಹ ಶೋಧ ಯಂತ್ರದ ಮೂಲಕ ಪ್ರಯಾಣಕರ ಮತ್ತು ಬ್ಯಾಗ್ ತಪಾಸಣೆ ನಡೆಸುವುದು, ಬೋರ್ಡಿಂಗ್ ಪಾಸ್ ನೀಡಿಕೆ, ವಿಮಾನ ನಿಲ್ದಾಣದ ಹೊರಗೆ ಮತ್ತು ಒಳಗೆ ಬರುವುದು ಸೇರಿದಂತೆ ಹಲವು ರೀತಿಯಲ್ಲಿ ನೆರವು ನೀಡಲಿದೆ. 
ಕೆಂಪ ರೋಬೋಟ್ ನ ಪ್ರಯೋಗಿಕ ಪರೀಕ್ಷೆ ನಡೆದಿದ್ದು, ಶೀಘ್ರ ಕೆಲಸವನ್ನು ಆರಂಭಿಸಲಿದೆ ಎಂದು ಮಾಹಿತಿ ತಂತ್ರಜ್ಞಾನ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಗತ್ತಿನ ಹಲವು ವಿಮಾನ ನಿಲ್ದಾಣಗಳಲ್ಲಿ ರೋಬೋಟ್ ಗಳು ಕೆಲಸ ನಿರ್ವಹಿಸುತ್ತಿದ್ದು ಇದೀಗ ಈ ವ್ಯವಸ್ಥೆ ಹೊಂದಿದ ವಿಮಾನ ನಿಲ್ದಾಣಗಳ ಸಾಲಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕೂಡ ಸೇರಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.