ರಾಜ್ಯ

ಚುನಾವಣಾ ನೀತಿ ಸಂಹಿತೆ ಜಾರಿ: ಹೊಸ ವಿದ್ಯುತ್ ದರ ಘೋಷಣೆ ವಿಳಂಬ

ಮುಂಬರುವ ವಿಧಾನಸಭೆ ಚುನಾವಣೆ ಮತ್ತು ನೀತಿ ಸಂಹಿತೆ ಜಾರಿ ವಾರ್ಷಿಕ ವಿದ್ಯುತ್ ದರ ಹೆಚ್ಚಳ ...

ಚುನಾವಣಾ ನೀತಿ ಸಂಹಿತೆ ಜಾರಿ: ಹೊಸ ವಿದ್ಯುತ್ ದರ ಘೋಷಣೆ ವಿಳಂಬ
ಬೆಂಗಳೂರಿನ ಹಲವೆಡೆ ವಿದ್ಯುತ್ ವೈರ್ ಮುರಿದು ಬಿದ್ದು ಜನರಿಗೆ ಮತ್ತು ಜಾನುವಾರಗಳ ಸಂಚಾರಕ್ಕೆ ಅಪಾಯವುಂಟಾಗಿದೆ
Published On :

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ಮತ್ತು ನೀತಿ ಸಂಹಿತೆ ಜಾರಿ ವಾರ್ಷಿಕ ವಿದ್ಯುತ್ ದರ ಹೆಚ್ಚಳ ಪ್ರಕ್ರಿಯೆ ಮೇಲೆ ಪರಿಣಾಮ ಬೀರಿದೆ. ಇತ್ತೀಚಿನ ವರ್ಷಗಳಲ್ಲಿ ಮೂರನೇ ಬಾರಿಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ(ಕೆಇಆರ್ ಸಿ) ಚುನಾವಣೆಗಳಿಂದಾಗಿ ಗ್ರಾಹಕರಿಗೆ ಹೊಸ ವಿದ್ಯುತ್ ದರವನ್ನು ಘೋಷಿಸಲು ಸಾಧ್ಯವಾಗುತ್ತಿಲ್ಲ.

ಉದ್ದೇಶಿತ ವಿದ್ಯುತ್ ದರ ಪರಿಷ್ಕರಣೆಗೆ ಸಾರ್ವಜನಿಕರ ಆಕ್ಷೇಪ ಪ್ರಕ್ರಿಯೆ ಮುಗಿದಿದ್ದು ವಿದ್ಯುತ್ ಆಯೋಗ ಹೊಸ ದರವನ್ನು ಇನ್ನೇನು ಘೋಷಿಸಬೇಕೆನ್ನುವಷ್ಟರಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ.

2013ರಲ್ಲಿ ವಿಧಾನಸಭೆ ಚುನಾವಣೆಯಿಂದಾಗಿ ವಿದ್ಯುತ್ ದರ ಘೋಷಣೆ ವಿಳಂಬವಾಯಿತು. ಈ ಬಗ್ಗೆ ಚುನಾವಣಾ ಆಯೋಗ ಯಾವುದೇ ಘೋಷಣೆ ಮಾಡುವಂತಿಲ್ಲ ಎಂದು ಲಿಖಿತ ಸ್ಪಷ್ಟನೆ ನೀಡಿತ್ತು, ನಂತರದ 2014ನೇ ವರ್ಷದಲ್ಲಿ ಕೂಡ ಲೋಕಸಭೆ ಚುನಾವಣೆಯಿದ್ದರಿಂದ ವಿದ್ಯುತ್ ದರ ಪರಿಷ್ಕರಣೆಯನ್ನು ಘೋಷಿಸಿರಲಿಲ್ಲ.

ಈ ವರ್ಷ ಮಾರ್ಚ್ 2ಕ್ಕೆ ಸಾರ್ವಜನಿಕರಿಂದ ಆಕ್ಷೇಪ ಸಲ್ಲಿಕೆ ಪ್ರಕ್ರಿಯೆಯನ್ನು ಮುಗಿಸಿದ್ದೆವು. ಆದರೆ ಚುನಾವಣಾ ಆಯೋಗದ ಆದೇಶದ ಪ್ರಕಾರ, ವಿದ್ಯುತ್ ದರ ಪರಿಷ್ಕರಣೆಯನ್ನು ಘೋಷಿಸಲು ಸಾಧ್ಯವಿಲ್ಲ, ಹೀಗಾಗಿ ಚುನಾವಣಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯುವವರೆಗೆ ವಿದ್ಯುತ್ ದರ ಪರಿಷ್ಕರಣೆ ಮಾಡುವುದಿಲ್ಲ ಎಂದು ಕೆಇಆರ್ ಸಿ ಅಧ್ಯಕ್ಷ ಎಂಕೆ ಶಂಕರ್ ಲಿಂಗೇಗೌಡ ತಿಳಿಸಿದ್ದಾರೆ.

ಈ ವರ್ಷ ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಪ್ರತಿ ಯೂನಿಟ್ ವಿದ್ಯುತ್ ಗೆ ಎಲ್ಲಾ ವರ್ಗದ ಜನರಿಗೆ 82 ಪೈಸೆ ಏರಿಕೆ ಮಾಡುವಂತೆ ಕೋರಿದೆ. ಬೆಸ್ಕಾಂ ವಿರುದ್ಧ ಬೆಂಗಳೂರು ನಿವಾಸಿಗಳಿಂದ ಹಲವು ದೂರುಗಳು ಕೇಳಿಬಂದಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.