ರಾಜ್ಯ

ಲಿಂಗಾಯತ ವಿವಾದ: ನಿಲುವು ಸ್ಪಷ್ಟಪಡಿಸುವಂತೆ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ

ಲಿಂಗಾಯತ ಮತ್ತು ವೀರಶೈವ ಸಮುದಾಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಸಂಬಂಧ ರಾಜ್ಯಸರ್ಕಾರ ಕಳುಹಿಸಿರುವ ಶಿಫಾರಸ್ಸಿಗೆ ಸಂಬಂಧಿಸಿದಂತೆ ಕೇಂದ್ರಸರ್ಕಾರ ಸ್ಪಷ್ಟ ನಿಲುವು ತಾಳುವಂತೆ ಹೈಕೋರ್ಟ್ ಸೂಚನೆ ನೀಡಿದೆ.

ಲಿಂಗಾಯತ ವಿವಾದ: ನಿಲುವು ಸ್ಪಷ್ಟಪಡಿಸುವಂತೆ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
ಹೈಕೋರ್ಟ್
Published On :

ಬೆಂಗಳೂರು: ಲಿಂಗಾಯತ ಮತ್ತು ವೀರಶೈವ ಸಮುದಾಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಸಂಬಂಧ ರಾಜ್ಯಸರ್ಕಾರ ಕಳುಹಿಸಿರುವ ಶಿಫಾರಸ್ಸಿಗೆ ಸಂಬಂಧಿಸಿದಂತೆ ಕೇಂದ್ರಸರ್ಕಾರ ಸ್ಪಷ್ಟ ನಿಲುವು ತಾಳುವಂತೆ ಹೈಕೋರ್ಟ್ ಸೂಚನೆ ನೀಡಿದೆ.

ಈ ಸಂಬಂಧ  ಶಶಿಧರ್ ಶಾನ್ ಬಾಗ್ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಾಮೂರ್ತಿ ದೀನೇಸ್ ಮಹೇಶ್ವರಿ ಮತ್ತು ನ್ಯಾಯಾಧೀಶರಾದ ಬಿ.ಎಂ. ಶ್ಯಾಮ್ ಪ್ರಸಾದ್ ಅವರನ್ನೊಳಗೊಂಡ ಪೀಠ,ಮಾರ್ಚ್ 22 ರೊಳಗೆ ಕೇಂದ್ರಸರ್ಕಾರ ಸ್ಪಷ್ಟ ನಿಲುವು ಸೂಚಿಸುವಂತೆ ತಿಳಿಸಿದ್ದು, ವಿಚಾರಣೆಯನ್ನು ಏಪ್ರಿಲ್ 13ಕ್ಕೆ ಮುಂದ್ದೂಡಿದೆ.

ಅಡ್ವೋಕೇಟ್ ಜನರಲ್ ಮಧುಸೂದನ್ ಆರ್ ನಾಯಕ್ ಲಿಂಗಾಯತ, ವೀರಶೈವ ಸಮುದಾಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ರಾಜ್ಯಸರ್ಕಾರದ ನಿರ್ಧಾರದ ಕುರಿತ ವರದಿಯನ್ನು ವಿಭಾಗೀಯ ಪೀಠದ ಮುಂದೆ ಮಂಡಿಸಿ,  ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಈ  ಪ್ರಕರಣದ ತುರ್ತು ವಿಚಾರಣೆ ಅಗತ್ಯವಿಲ್ಲ ಎಂದು ಹೇಳಿದರು.

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ವತಿಯಿಂದ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ  ನಿವೃತ್ತ ನ್ಯಾ. ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಆ ಸಮಿತಿ ವರದಿ ನೀಡಿದೆ ಆದರೆ, ಅದಕ್ಕೆ ಅಧಿಕಾರವಿಲ್ಲ ಎಂದು ಮಧುಸೂದನ್ ಆರ್ ನಾಯಕ್  ನ್ಯಾಯಾಲಯಕ್ಕೆ ತಿಳಿಸಿದ್ದಾರೆ.



Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.