ರಾಜ್ಯ

ಕಾವೇರಿ ವಿವಾದ: ಏಪ್ರಿಲ್ 12ರಂದು ಕರ್ನಾಟಕ ಬಂದ್‌ಗೆ ವಾಟಾಳ್ ನಾಗರಾಜ್ ಕರೆ

ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಏಪ್ರಿಲ್ 12ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ...

ಕಾವೇರಿ ವಿವಾದ: ಏಪ್ರಿಲ್ 12ರಂದು ಕರ್ನಾಟಕ ಬಂದ್‌ಗೆ ವಾಟಾಳ್ ನಾಗರಾಜ್ ಕರೆ
ವಾಟಾಳ್ ನಾಗರಾಜ್
Published On :
ಅತ್ತಿಬೆಲೆ (ಬೆಂಗಳೂರು): ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಏಪ್ರಿಲ್ 12ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ. 
ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್ ಅವರು, ಯಾವುದೇ ಕಾರಣಕ್ಕೂ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. 
ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಇಂದು ತಮಿಳುನಾಡಿನವರು ಬಂದ್ ಮಾಡಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರದ ವಿರುದ್ಧವಾಗಿ ಏಪ್ರಿಲ್ 12ಕ್ಕೆ ಬಂದ್ ಗೆ ಕರೆ ನೀಡಲಾಗಿದೆ ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ. 
ತಮಿಳರು ಬಿರಿಯಾನಿ ತಿಂದು ಪ್ರತಿಭಟನೆ ಮಾಡುತ್ತಿದ್ದಾರೆ. ನಾವು ಪ್ರತಿಭಟನೆ ಮಾಡಲು ಮುಂದಾಗಿರಲಿಲ್ಲ ಆದರೆ ತಮಿಳರೇ ನಾವು ಬಂದ್ ಮಾಡುವ ಪರಿಸ್ಥಿತಿಯನ್ನು ತಂದೊಡ್ಡಿದ್ದಾರೆ ಎಂದರು. 
ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಕಮಲ್ ಹಾಸನ್ ಅವರು ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಲು ಕೇಂದ್ರದ ಮೇಲೆ ಒತ್ತಡ ಹೇರುವಂತೆ ತಮಿಳುನಾಡು ಸರ್ಕಾರಕ್ಕೆ ಒತ್ತಾಯಿಸುತ್ತಿದ್ದು ಈ ಹಿನ್ನೆಲೆಯಲ್ಲಿ ರಜನಿಕಾಂತ್ ಹಾಗೂ ಕಮಲ್ ಹಾಸನ್ ಅಭಿನಯದ ಯಾವುದೇ ಚಿತ್ರಗಳು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ನಾವು ಬಿಡುವುದಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.