ಬೆಂಗಳೂರು: ದಾಖಲೆಯಿಲ್ಲದ 8 ಕೋಟಿ ರು. ಹಣ ಜಪ್ತಿ
ಕಳೆದ ಹಲವು ದಿನಗಳಿಂದ ಶುಕ್ರವಾರದವರೆಗೆ ದಾಖಲೆಯಿಲ್ಲದ 8 ಕೋಟಿ ರು ಹಣ ಹಾಗೂ ವಸ್ತುಗಳನ್ನು ಪೊಲೀಸರು ಮತ್ತು ಚುನಾವಣಾ ಆಯೋಗದ ಅಧಿಕಾರಿಗಳು ..

Published On :
ಬೆಂಗಳೂರು: ಕಳೆದ ಹಲವು ದಿನಗಳಿಂದ ಶುಕ್ರವಾರದವರೆಗೆ ದಾಖಲೆಯಿಲ್ಲದ 8 ಕೋಟಿ ರು ಹಣ ಹಾಗೂ ವಸ್ತುಗಳನ್ನು ಪೊಲೀಸರು ಮತ್ತು ಚುನಾವಣಾ ಆಯೋಗದ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ.
ಶುಕ್ರವಾರ ಗುತ್ತಿಗೆದಾರ ಹಾಗೂ ಆತನ ಚಾಲಕನನ್ನು ಬಂಧಿಸಿರುವ ಕೇಂದ್ರ ವಿಭಾಗದ ಪೊಲೀಸರು, 1.5 ಕೋಟಿ ರು ವಶಕ್ಕೆ ಪಡೆದಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣಾ ವೇಳೆ ಮತದಾರರಿಗೆ ಹಂಚಲು ಹಣವನ್ನು ಕೊಂಡೊಯ್ಯಲಾಗುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ.
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಸುಭಾಷ್. ಎಂ ಹಾಗೂ ಆತನ ಡ್ರೈವರ್ ವೆಂಕಟ್ ಸುರೇಶ್ ಬಾಬು ಅವರನ್ನು ಬಂಧಿಸಲಾಗಿದೆ. ವಶಕ್ಕೆ ಪಡೆದುಕೊಂಡಿರುವ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.
ಏಪ್ರಿಲ್ 5 ರಂದು ಚುನಾವಣಾ ಆಯೋಗ ಹಣ ಹಾಗೂ ವಸ್ತುಗಳನ್ನು ವಶ ಪಡಿಸಿಕೊಳ್ಳಲಾಗಿತ್ತು, ಚುನಾವಣಾ ಆಯೋಗದ ಮಾಹಿತಿ ಪ್ರಕಾರ 2,04,74,130 ರು ಹಣ ಹಾಗೂ 6,301 ಲೀಟರ್ ಲಿಕ್ಕರ್ ಹಾಗೂ 23.76 ಲಕ್ಷ ಮೌಲ್ಯದ ಡ್ರಗ್ಸ್ , 2,464 ಕೆಜಿ ಚಿನ್ನ, ಮತ್ತು ಗೃಹಪಯೋಗಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.
ಜೊತೆಗೆ ರಾಜಕಾರಣಿಗಳು ಟಿವಿ ಚಾನೆಲ್ ಗಳಲ್ಲಿ ನೀಡುತ್ತಿರುವ ಪ್ರಚಾರ ಹಾಗೂ ಜಾಹೀರಾತಿಗಳನ್ನು ಸೂಕ್ಷ್ಮವಾಗಿ ಗಮನಸಿಲಾಗುತ್ತಿದೆ ಎಂದು ಆಯೋಗ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


