ರಾಜ್ಯ

ಹಾಸನ ಜಿಲ್ಲಾಧಿಕಾರಿ ವಿರುದ್ಧ ಚುನಾವಣಾ ಆಯೋಗಕ್ಕೆ ಉಸ್ತುವಾರಿ ಸಚಿವ ಮಂಜು ದೂರು!

ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಂದ ನೋಟಿಸ್ ಪಡೆದಿದ್ದ ಸಚಿವ ಎ ಮಂಜು ಇದೀಗ ಜಿಲ್ಲಾಧಿಕಾರಿಗಳ ವಿರುದ್ಧವೇ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಹಾಸನ ಜಿಲ್ಲಾಧಿಕಾರಿ ವಿರುದ್ಧ ಚುನಾವಣಾ ಆಯೋಗಕ್ಕೆ ಉಸ್ತುವಾರಿ ಸಚಿವ  ಮಂಜು ದೂರು!
ಸಂಗ್ರಹ ಚಿತ್ರ
Published On :
ಹಾಸನ: ಇತ್ತೀಚೆಗಷ್ಟೇ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಂದ ನೋಟಿಸ್ ಪಡೆದಿದ್ದ ಸಚಿವ ಎ ಮಂಜು ಇದೀಗ ಜಿಲ್ಲಾಧಿಕಾರಿಗಳ ವಿರುದ್ಧವೇ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಮಾಧ್ಯಮವೊಂದು ವರದಿ ಮಾಡಿರುವಂತೆ ಹಾಸನ ಜಿಲ್ಲಾಧಿಕಾರಿ ರೋಹಣಿ ಸಿಂಧೂರಿ ಅವರು ಚುನಾವಣಾ ನೀತಿ ಸಂಹಿತೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಮಂಜು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ ಎನ್ನಲಾಗಿದೆ. 
'ರೋಹಿಣಿ ಸಿಂಧೂರಿಯವರು ಉದ್ದೇಶ ಪೂರ್ವಕವಾಗಿ ನನ್ನ ವಿರುದ್ಧ ನಡೆದುಕೊಳ್ಳುತ್ತಿದ್ದಾರೆ. ತಕ್ಷಣವೇ ಜಿಲ್ಲಾಧಿಕಾರಿಯನ್ನು ಬದಲಿಸಬೇಕು ಮತ್ತು ಅವರ ವಿರುದ್ಧ ತನಿಖೆ ನಡೆಸಬೇಕು. ಜಿಲ್ಲಾಧಿಕಾರಿ ನೀತಿ ಚುನಾವಣಾ ನೀತಿ ಸಂಹಿತೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಅವರ ಕ್ರಮದ ಬಗ್ಗೆ ಸರಿಯಾಗಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಚುನಾವಣಾಧಿಕಾರಿ ಸಂಜೀವ್​ ಕುಮಾರ್​ಗೆ ಸಚಿವ ಮಂಜು ದೂರು ನೀಡಿದ್ದಾರೆ.
ಇತ್ತೀಚೆಗಷ್ಟೇ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯನ್ನು ಬಳಕೆ ಮಾಡುತ್ತಿದ್ದ ಆರೋಪದ ಮೇರೆಗೆ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಸಚಿವ ಎ ಮಂಜು ಅವರಿಗೆ ವಿವರಣೆ ಕೋರಿ ನೋಟಿಸ್ ನೀಡಿದ್ದರು. ಇದಕ್ಕೂ ಮೊದಲು ಬಾಹುಬಲಿ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲೂ ಸಿಂಧೂರಿ ಮತ್ತು ಸಚಿವ ಮಂಜು ಅವರ ನಡುವೆ ತಿಕ್ಕಾಟ ನಡೆದಿತ್ತು. ಮಸ್ತಕಾಭಿಷೇಕದ ವೇಳೆ ಕಟ್ಟುನಿಟ್ಟಿನ ಕ್ರಮ ಜಾರಿಗೆ ತಂದಿದ್ದರಿಂದ ಮಂಜು ಬೆಂಬಲಗರವು ಜಿಲ್ಲಾಧಿಕಾರಿಗಳ ವಿರುದ್ಧ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.