ರಾಜ್ಯ

ತಾರಕಕ್ಕೇರಿದ ಕಾವೇರಿ ಗದ್ದಲ: ತಮಿಳುನಾಡಿಗೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ಸ್ಥಗಿತ

ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಪಟ್ಟು ಹಿಡಿದಿರುವ ತಮಿಳುನಾಡಿನಲ್ಲಿ ಪ್ರತಿಭಟನೆ ತಾರಕಕ್ಕೇರಿರುವ ಹಿನ್ನಲೆ.ಲ್ಲಿ ಮುಂಜಾಗ್ರತಾ ಕ್ರಮವಾಗಿ ಕೆಎಸ್ ಆರ್ ಟಿಸಿ ತನ್ನ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದೆ ಎನ್ನಲಾಗಿದೆ.

ತಾರಕಕ್ಕೇರಿದ ಕಾವೇರಿ ಗದ್ದಲ: ತಮಿಳುನಾಡಿಗೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ಸ್ಥಗಿತ
ಸಂಗ್ರಹ ಚಿತ್ರ
Published On :
ಬೆಂಗಳೂರು: ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಪಟ್ಟು ಹಿಡಿದಿರುವ ತಮಿಳುನಾಡಿನಲ್ಲಿ ಪ್ರತಿಭಟನೆ ತಾರಕಕ್ಕೇರಿರುವ ಹಿನ್ನಲೆ.ಲ್ಲಿ ಮುಂಜಾಗ್ರತಾ ಕ್ರಮವಾಗಿ ಕೆಎಸ್ ಆರ್ ಟಿಸಿ ತನ್ನ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದೆ ಎನ್ನಲಾಗಿದೆ.
ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಆಗ್ರಸಿಹಿಸಿ ವಿವಿಧ ಸಂಘ ಸಂಸ್ಥೆಗಳು ಇಂದು ತಮಿಳುನಾಡು ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ತಮಿಳುನಾಡಿಗೆ ಕೆಎಸ್ ಆರ್ ಟಿಸಿ ಬಸ್ ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. 
ನಿನ್ನೆ ತೆರಳಿದ್ದ 250 ಬಸ್​ಗಳು ವಾಪಸ್​ ಆಗಿದ್ದು ಬೆಳಗ್ಗೆ ಬಸ್​ ಸಂಚಾರ ಸ್ಥಗಿತಗೊಂಡಿದೆ. ಗಡಿ ಭಾಗದವರೆಗೆ ಹೋಗಿ ಪೊಲೀಸ್​ ಬಂದೋಬಸ್ತ್​ನಲ್ಲಿ ವಾಪಸ್​ ಬಂದಿವೆ. ಸಂಜೆ ನಾಲ್ಕುಗಂಟೆವರೆಗೆ ಬಸ್​ ಸಂಚಾರ ಸ್ಥಗಿತಗೊಳಿಸಲಾಗುವುದು ನಂತರ ಪರಿಸ್ಥಿತಿ ಅವಲೋಕಿಸಿ ಪ್ರಾರಂಭಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಇನ್ನು ನಿನ್ನೆ ಚೆನ್ನೈ ನಲ್ಲಿ ಐಪಿಎಲ್ ಪಂದ್ಯ ನಡೆಯುತ್ತಿದ್ದ ಸಂದರ್ಭದಲ್ಲೇ ಚಿಪಾಕ್ ಕ್ರೀಡಾಂಗಣದಲ್ಲಿ ಪ್ರೇಕ್ಷಕರು ದಾಂಧಲೆಗೆ ಇಳಿದಿದ್ದರು. ಮೈದಾನಕ್ಕೆ ಶೂ, ವಾಟರ್ ಬಾಟಲ್ ಗಳನ್ನು ಎಸೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. ಇದರಿಂದ ಕೆಲಕಾಲ ಗೊಂದಲ ವಾತಾವರಣ ನಿರ್ಮಾಣವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.